

ಹುಬ್ಬಳ್ಳಿ: ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ನೀಡುವ ಸಂಗಮ ಸಿರಿ ಪ್ರಶಸ್ತಿಯು ಈ ಬಾರಿ ಕಾವ್ಯ ಕ್ಷೇತ್ರದಲ್ಲಿನ ಸಾಧಕರಿಗೆ ನೀಡಲಾಗುತ್ತಿದ್ದು, ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಶಿವರ ಗ್ರಾಮದ ಡಾ .ಎಸ್ .ಕೆ. ಮಂಜುನಾಥ ಅವರಿಗೆ ಸಂದಿದೆ.
ಗಾಳಿಯ ಎದೆ ಸೀಳಿ ಹೊರಟ ಹಕ್ಕಿ ಎಂಬ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿದ್ದು, ಡಿಸೆಂಬರ್ 8ರಂದು ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ.ಗೌಡಪ್ಪಗೊಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ ತಿಳಿಸಿದ್ದಾರೆ.
ಕವಿ ಮಹಾಂತಪ್ಪ ನಂದೂರ ಅವರ ನೇತೃತ್ವದ ಸಾಹಿತ್ಯ ಸಮಿತಿ ಈ ಆಯ್ಕೆಯನ್ನು ಮಾಡಿದೆ.