ಡಾ.ಮಹಾಂತ ಶಿವಯೋಗಿ ಜಯಂತಿ

01-08-Shiva-2
ರಾಯಚೂರಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಡಾ.ಮಹಾಂತ ಶಿವಯೋಗಿಗಳ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಗಳಾ ನಾಯಕ ಇದ್ದರು.
Published on

ರಾಯಚೂರು: ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಂಗಳವಾರ ಸರಳ ರೀತಿಯಲ್ಲಿ ಆಚರಿಸಲಾಯಿತು.
ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಇಂದಿನ ಯುವ ಪೀಳಿಗೆ ವ್ಯಸನದಿಂದ ಮುಕ್ತರಾಗುವ ಮೂಲಕ ಮಹಾಂತ ಶಿವಯೋಗಿಗಳ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಗಳಾ ನಾಯಕ, ವಾರ್ತಾ ಇಲಾಖೆ ಸಿಬ್ಬಂದಿಗಳಾದ ಲಿಂಗರಾಜ, ಪ್ರಕಾಶ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net