ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಜನ್ಮದಿನಾಚರಣೆಗೆ ಅಗತ್ಯ ಸಿದ್ಧತೆ ಸೂಚನೆ

ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಜನ್ಮದಿನಾಚರಣೆಗೆ ಅಗತ್ಯ ಸಿದ್ಧತೆ ಸೂಚನೆ
Published on

 ಹಾಸನ: ಪ್ರತಿ ವರ್ಷದಂತೆ ಈ ವರ್ಷ ಕೂಡ ಆ.1ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವ್ಯಸನಮುಕ್ತ ದಿನಾಚರಣೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಆ.1 ರಂದು ಸಾಹಿತ್ಯ ಪರಿಷತ್ತು ಭವನದಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಹಾಗೂ ಕಾರ್ಯಕ್ರಮದ ಅಂಗವಾಗಿ ಮನೋರೋಗ ತಜ್ಞರಿಂದ ವಿಶೇಷ ಉಪನ್ಯಾಸ ಏರ್ಪಡಿಸುವಂತೆ ಮತ್ತು ಕಿರುನಾಟಕ, ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸುವಂತೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ವ್ಯಸನ ಮುಕ್ತ ಆಂದೋಲನ ಸೃಷ್ಟಿಸಿದ ಶ್ರೀ ಮಹಾಂತೇಶ್ವರ ಸಂಸ್ಥಾನ ಮಠದ ಮಹಾಂತ ಶಿವಯೋಗಿಯವರ ಬದುಕು ಆದರ್ಶಗಳನ್ನು ಜನರಿಗೆ ಪರಿಚಯಿಸುವ ಕೆಲಸ ಮಾಡಬೇಕಿದೆ. ತಂಬಾಕು, ಮದ್ಯಪಾನ ಹಾಗೂ ಇತರ ವ್ಯಸಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಚಟುವಟಿಕೆ ಆಯೋಜಿಸುವಂತೆ ಸೂಚನೆ ನೀಡಿದರು.

ಶಾಲಾ- ಕಾಲೇಜುಗಳ ಪಕ್ಕದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಅರಿವು ಮೂಡಿಸಲು ಗುಲಾಬಿ ಆಂದೋಲನ ಆಯೋಜಿಸುವ ಬಗ್ಗೆ ತಂಬಾಕು ನಿಯಂತ್ರಣ ಘಟಕದ ಅಧಿಕಾರಿ ಜೆ. ಮಮತಾ ವಿವರಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಈ. ಕೃಷ್ಣೆಗೌಡ, ಡಿ.ಡಿ.ಪಿ.ಐ ಪ್ರಕಾಶ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಹಾಗೂ ವಿವಿಧ ಇಲಾಖೆಗ ಅಧಿಕಾರಿಗಳು ಕಾರ್ಯಕ್ರಮದ ಉತ್ತಮ ಸಂಘಟನೆಗೆ ಹಲವು ಸಲಹೆಗಳನ್ನು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net