

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ.ಮಹೇಶ ಗಂವ್ಹಾರ ಅವರು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿವಿಯಿಂದ ಅತ್ಯುತ್ತಮ ಎನ್‌ಎಸ್‌ಎಸ್ ಯೋಜನೆ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ಪಡೆದಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಂ.ಚAದ್ರಶೇಖರ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಾದೇಶಿಕ ನಿರ್ದೇಶಕ ಡಾ.ಕಾರ್ತಿಗೇನ್, ರಾಜ್ಯ ಎನ್‌ಎಸ್‌ಎಸ್ ಅಧಿಕಾರಿ ಡಾ.ಪ್ರತಾಪಲಿಂಗಯ್ಯ, ಉಪನಿರ್ದೇಶಕ ಯಲ್ಲಪ್ಪ ಉಪ್ಪಿನ, ಸಂಯೋಜನಾಧಿಕಾರಿ ಪ್ರೊ.ಶಾಂತಾದೇವಿ ಟಿ. ಇತರರಿದ್ದರು.
ಹರ್ಷ: ಡಾ.ಮಹೇಶಕುಮಾರ ಸಾಧನೆಗೆ ಎಚ್‌ಕೆಇ ಅಧ್ಯಕ್ಷ, ಎಂಎಲ್ಸಿ ಶಶೀಲ ನಮೋಶಿ, ಉಪಾಧ್ಯಕ್ಷ ರಾಜಾ ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ ಚಿಂಚೋಳಿ, ಆಡಳಿತ ಮಂಡಳಿ ಸದಸ್ಯರು, ಆಡಳಿತಾಧಿಕಾರಿ ಡಾ.ಸಿ.ಸಿ.ಪಾಟೀಲ್, ಪ್ರಾಚಾರ್ಯ ಡಾ.ರಾಜೇಂದ್ರ ಕೊಂಡಾ ಹರ್ಷ ವ್ಯಕ್ತಪಡಿಸಿದ್ದಾರೆ.