ಡಾ. ಲಕ್ಕಣ್ಣವರಗೆ ಶ್ರೇಷ್ಠ ವೈದ್ಯ ಪ್ರಶಸ್ತಿ

1661597417488
Published on

ವಿಜಯಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಜ್ಯ ಸರ್ಕಾರ ಕೊಡಮಾಡುವ ಶ್ರೇಷ್ಠ ವೈದ್ಯ ಪ್ರಶಸ್ತಿ ಈ ಬಾರಿ ವಿಜಯಪುರ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಸಂಗಣ್ಣ ಲಕ್ಕಣ್ಣವರ ಅವರಿಗೆ ಲಭಿಸಿದೆ.

ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದ್ರು.

ವಿಜಯಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಎಸ್ ಎಲ್ ಲಕ್ಕಣ್ಣವರ ಅವರಿಗೆ 2022 ನೇ ಸಾಲಿನ ರಾಜ್ಯದ ಅತ್ಯುತ್ತಮ ಜಿಲ್ಲಾ ಶಸ್ತ್ರಚಿಕಿತ್ಸಕ ಪ್ರಶಸ್ತಿ ಪ್ರದಾನ ಮಾಡಿದರು. ಆರೋಗ್ಯ ಸಚಿವ ಕೆ. ಸುಧಾಕರ, ಕಂದಾಯ ಸಚಿವ ಆರ್. ಅಶೋಕ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ರಾಜ್ಯದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಕಳೆದ 24 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಲಕ್ಕಣ್ಣವರ ಅವರ ನಿಷ್ಠೆ, ಪ್ರಾಮಾಣಿಕ ಮನೋಭಾವನೆಯ ಸೇವೆಗೆ ಸಂದ ಗೌರವವಾಗಿದ್ದು, ಕಳೆದ ಒಂದು ವರ್ಷದಿಂದ ಇವರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಡಾ. ಲಕ್ಕಣ್ಣನವರ ಅವರಿಗೆ ಪ್ರಶಸ್ತಿ ದೊರಕಿದ್ದಕ್ಕೆ ಆಸ್ಪತ್ರೆಯ ವೈದ್ಯರು, ಅಧಿಕಾರಿಗಳು, ತಾಂತ್ರಿಕ ವಿಭಾಗ ಸೇರಿದಂತೆ ಆಸ್ಪತ್ರೆಯ ಸಮಸ್ತ ನೌಕರರು, ಸಿಬ್ಬಂದಿ ವರ್ಗದವರು ಸಹ ಸನ್ಮಾನಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net