ಡಾ.ವಿನಾಯಕ ಪ್ರಸನ್ನ ನಿಧನ

02 yerriswamy 05..
Published on

ಬಳ್ಳಾರಿ: ವಿಮ್ಸ್ ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ.ಡಾ.ವಿನಾಯಕ ಪ್ರಸನ್ನ(50) ಅನಾರೋಗ್ಯ ದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನ ಹೊಂದಿದರು. ಪತ್ನಿ ಡಾ.ವನಜ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿ ಅಪಾರ ಬಂಧು ಬಳಗ ಮತ್ತು ಸ್ನೇಹಿತರ ಬಳಗವನ್ನು ಅಗಲಿದ್ದಾರೆ. ಇವರ ಪಾರ್ಥಿವ ಶರೀರರವನ್ನು ಗುರುವಾರ ಸಂಜೆ 6 ಗಂಟೆಗೆ ಬಳ್ಳಾರಿಗೆ ತರಲಾಗುವುದು. ಇವರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ ಬಳ್ಳಾರಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net