ಡಾ.ವಿಷ್ಣುವರ್ಧನ್ ಸ್ಮಾರಕ ನೆಲಸಮಕ್ಕೆ ಖಂಡನೆ

M.Ramchandru
Published on

ಚಾಮರಾಜನಗರ: ಕನ್ನಡ ಚಲನಚಿತ್ರ ಮೇರುನಟ ಡಾ.ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಿರುವುದು ಅತ್ಯಂತ ಖಂಡನೀಯ ಎಂದು ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಎಲ್.ರಾಮಚಂದ್ರ ಹೇಳಿದರು.

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮ ಮಾಡಿರುವುದು ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನವನ್ನು ಉಂಟುಮಾಡಿದೆ. ಈ ವಿಚಾರದಲ್ಲಿ ಸರ್ಕಾರ ಮಧ್ಯಸ್ಥಿಕೆಯನ್ನು ವಹಿಸಿಕೊಂಡು ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕು. ಇಲ್ಲವಾದರೇ ಜಿಲ್ಲೆಯ 5 ತಾಲೂಕಿನಲ್ಲೂ ಇರುವ ಡಾ.ವಿಷ್ಣುವರ್ಧನ್ ಅಭಿಮಾನಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರವಾದ ಜಾಗದಲ್ಲೇ ಸ್ಮಾರಕವನ್ನು ಮತ್ತೆ ನಿರ್ಮಾಣ ಮಾಡಬೇಕು. ಸರ್ಕಾರದ ವತಿಯಿಂದ ವ್ಯಾಜ್ಯದ ಸಂಬಂಧ ವಕೀಲರನ್ನು ನೇಮಿಸಿ ನ್ಯಾಯದೊರಕಿಸಿಕೊಡಬೇಕು. ಡಾ.ವಿಷ್ಣುವರ್ಧನ್ ಅವರ 75ನೇ ವರ್ಷದ ಅಮೃತ ಮಹೋತ್ಸವ ನಡೆಯುವ ಮೊದಲೇ ಡಾ.ವಿಷ್ಣವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಸಮಿತಿಯ ಕೊಳ್ಳೇಗಾಲ ಅಧ್ಯಕ್ಷ ಸಿದ್ದರಾಜು ನಾಯಕ, ಅಭಿಮಾನಿಗಳಾದ ಪ್ರಕಾಶ್, ರಾಜೇಂದ್ರ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net