ಡಾ.ವೀರೇಂದ್ರ ಹೆಗ್ಗಡೆ ಕಾರ್ಯ ಶ್ಲಾಘನೀಯ

19Athanigrameen1
Published on

ಅಥಣಿ ಗ್ರಾಮೀಣ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಮಾಜ ನಿರ್ಮಾಣ ಮಾಡುತ್ತಿರುವ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಸಂಜಯ ನಾಡಗೌಡ ಹೇಳಿದರು.

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಪ್ರಭುಜಿ ಸೇವಾ ಸಂಘ ಕಟ್ಟಡ ಜೀರ್ಣೋದ್ಧಾರ ಕಾಮಗಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶನಿವಾರ ೧ ಲಕ್ಷ ರೂ. ಚೆಕ್ ವಿತರಿಸಿ ಮಾತನಾಡಿ, ಮಹಿಳೆಯರ ಸಬಲೀಕರಣದಲ್ಲಿ ಯೋಜನೆ ಪಾತ್ರ ಮುಖ್ಯವಾಗಿದೆ ಎಂದರು.

ತಾಲೂಕು ಯೋಜನಾಧಿಕಾರಿ ರಜಬಲಿ ಮೇಲಿನಮನಿ ಮಾತನಾಡಿ, ಎಲ್ಲರೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ವಲಯ ಮೇಲ್ವಿಚಾರಕಿ, ಶಾಂತಾ ಪೂಜಾರಿ, ಸೇವಾ ಪ್ರತಿನಿಧಿ ಸಂಕೇತ ಚೌಗಲೆ, ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಶಿವಪ್ಪ ಬನಸೋಡೆ, ಸಿದ್ದಪ್ಪ ಚಿಂಚಲಿ, ದುಂಡಪ್ಪ ಕೋಳಿ, ಶೌರ್ಯ ಘಟಕದ ಕ್ಯಾಪ್ಟನ್ ಸದಾಶಿವ ಕಾಂಬಳೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net