

ವಿಜಯಪುರ: ಸವೋರ್ಚ್ಚ ನ್ಯಾಯಾಲಯ ತೀರ್ಪಿನಂತೆ ಬೀದಿ ನಾಯಿಗಳಿಗೆ ಆಶ್ರಯಕ್ಕಾಗಿ ಬುರಾಣಪುರನಲ್ಲಿ ಕಾಯ್ದಿರಿಸಿದ ಎರಡು ಎಕರೆ ಜಾಗದಲ್ಲಿ ಡಾಗ್ ಶೆಲ್ಟರ್ ನಿರ್ಮಾಣಕ್ಕಾಗಿ ನೀಲಿ ನೆ ತಯಾರಿಸಿ ಸಲ್ಲಿಸಬೇಕೆಂದು ಪಶುಪಾಲನಾ ಮತ್ತು ಪಶು ವೈದ್ಯಕಿಯ ಸೇವೆಗಳ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ ನೀಡಿದರು.ನಗರದ ಹೊರ ವಲಯದ ಬುರಾಣಪುರದಲ್ಲಿರುವ ಗೋಶಾಲೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಸೂಚಿಸಿದರಲ್ಲದೆ, ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಕಾಳಜಿಯಿಂದ ನೋಡಿಕೊಳ್ಳಬೇಕೆಂದು ಸಂಬಂಧಿಸಿದವರಿಗೆ ತಾಕೀತು ಮಾಡಿದರು.
ಬಳಿಕ ನಗರದಲ್ಲಿರುವ ಪಶುಪಾಲನಾ ಇಲಾಖೆ ಕಚೇರಿಗೆ ಭೇಟಿ ನೀಡಿ, ಬೀದಿ ನಾಯಿಗಳ ಸಂತಾನ ಹರಣಶಸ ಚಿಕಿತ್ಸಾ ಕಾರ್ಯಕ್ರಮದ ಕಟ್ಟಡ ನವೀಕರಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಡಿಸಿ ಸೂಚಿಸಿದರು. ಅಲ್ಲಿಂದ ಪಾಲಿಕ್ಲಿನಿಕ್ಗೆ ಭೇಟಿ ನೀಡಿ, ಜಾನುವಾರು ಚಿಕಿತ್ಸೆ, ನಾಯಿ ಮತ್ತು ಬೆಕ್ಕುಗಳ ಚಿಕಿತ್ಸೆ ಮತ್ತು ಶಸ ಚಿಕಿತ್ಸಾ ಕೊಠಡಿ, ರಕ್ತದ ಮಾದರಿ ಪರೀೆ ಮಾಡುವುದರ ಕುರಿತು ಮಾಹಿತಿ ಪಡೆದರು.ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಅಶೋಕ ೂಣಸಗಿ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ. ವಿ.ಎನ್. ಹಾಸಂಗಿಹಾಳ, ಅಮೋ ತಳವಾರ ಮತ್ತಿತರರಿದ್ದರು.
ಫೋಟೋ : ಎಂಎಂ 13&7
ವಿಜಯಪುರದ ಪಶುಪಾಲನಾ ಇಲಾಖೆ ಕಚೇರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯ ಮೆಕ್ಕಳಕಿ, ಅಶೋಕ ೂಣಸಗಿ, ವಿ.ಎನ್. ಹಾಸಂಗಿಹಾಳ ಮತ್ತಿತರರಿದ್ದಾರೆ.