Don't be limited to environmental protection programs.

Don't be limited to environmental protection programs.
Published on

ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ.ಟ್ರಸ್ಟ್) ಸೋಮವಾರಪೇಟೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಜೂರು ಹಾಗೂ ಅರಣ್ಯ ಇಲಾಖೆ ಸೋಮವಾರಪೇಟೆ ವಲಯ ಇವರ ಜಂಟಿ ಆಶ್ರಯದಲ್ಲಿ ಕಾಜೂರು ಸರ್ಕಾರಿ ಶಾಲಾ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ ಸೋಮವಾರ ನಡೆಯಿತು.

ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ಚಂದ್ರಶೇಖರ್ ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಕಾರ್ಯಕ್ರಮಗಳ ಮಟ್ಟಿಗೆ ಸೀಮಿತವಾಗದೆ, ಪ್ರತಿದಿನವೂ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ತಲೆಮಾರಿಗೆ ಹಸಿರಾಗಿರುವ ಭೂಮಿಯನ್ನು ನೀಡುವುದು ನಮ್ಮ ಹೊಣೆಗಾರಿಕೆ. ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಮಕ್ಕಳು, ಶಿಕ್ಷಕರು, ಪಾಲಕರು ಹಾಗೂ ಸಾರ್ವಜನಿಕರು ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಭಾಗವಾಗಿ ಮಕ್ಕಳಿಗಾಗಿ ಭಾಷಣ ಸ್ಪರ್ಧೆ, ಔಷಧೀಯ ಸಸ್ಯಗಳ ಸುವಾಸನೆ ಗುರುತಿಸುವ ಸ್ಪರ್ಧೆ, ಪರಿಸರ ಕುರಿತ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಬಳಿಕ ಶಾಲಾ ಮಕ್ಕಳು ಹಾಗೂ ಗಣ್ಯರಿಂದ ಶಾಲಾ ಆವರಣದಲ್ಲಿ ಅರಣ್ಯ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಗೋಪಾಲಕೃಷ್ಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ್, ಮುಖ್ಯ ಶಿಕ್ಷಕಿ ಸರಳಕುಮಾರಿ, ಕೃಷಿ ಮೇಲ್ವಿಚಾರಕ ಹರೀಶ್ ಕುಮಾರ್, ಸೇವಾಪ್ರತಿನಿಧಿ ಚೆನ್ನಮ್ಮ ರಾಜು, ಶಿಕ್ಷಕಿ ಅನೂಷ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net