ಡಿ.12 ರಂದು ನಗರಕ್ಕೆ ಸಿ.ಎಂ.ಭೇಟಿ ; ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ರೀಡಾಂಗಣದಲ್ಲಿ ಸಿದ್ದತೆ ಪರಿಶೀಲನೆ

03raju4
Published on

ಚಾಮರಾಜನಗರ: ಡಿಸೆಂಬರ್ 12 ರಂದು ಮುಖ್ಯಮಂತ್ರಿ ಬಸವರಾಜಬೊಮ್ಮಯಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಸತಿ ಮತ್ತು‌ ಮೂಲ ಸೌಕರ್ಯಗಳ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದವಿ.ಸೋಮಣ್ಣ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿದ್ದತೆ ಪರಿಶೀಲಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಚಿವರು, ಸಿ.ಎಂ. ಭೇಟಿ ನೀಡುವ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳವನ್ನು ವೀಕ್ಷಿಸಿದರು. ಈ ವೇಳೆ ಅಧಿಕಾರಿಗಳೊಂದಿಗೆ ಮಾತನಾಡಿದ ಸಚಿವರು ಮುಖ್ಯಮಂತ್ರಿಗಳ ಬರುವ ಹಿನ್ನಲೆಯಲ್ಲಿ ಕ್ರೀಡಾಂಗಣದಲ್ಲಿ ಸುಸಜ್ಜಿತ ವೇದಿಕೆ,ಸಾರ್ವಜನಿಕರ ಆಸನಗಳ ವ್ಯವಸ್ಥೆ, ಫಲಾನುಭವಿಗಳಿಗೆ ಪ್ರತ್ಯೇಕ ಆಸನಗಳುಬೃಹತ್ ಷಾಮಿಯಾನ,ಬ್ಯಾರಿಕೇಡ್ ಅಳವಡಿಸಲು ಸೂಚಿಸಿದರು.

ಸಾರ್ವಜನಿಕರು ಕ್ರೀಡಾಂಗಣಕ್ಕೆ ಆಗಮಿಸುವ ಹಾಗೂ ತೆರಳುವ ಮಾರ್ಗಗಳು ಹೆಚ್ಚು ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ಹೆಚ್ಚು ಜನರು ಬರುವ ನಿರೀಕ್ಚೆ ಇರುವ ಕಾರಣ ಎಲ್ಲೂ ಗೊಂದಲಗಳಾಗಬಾರದು ಹಾಗೂ ಸಾರ್ವಜನಿಕರಿಗೆ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು. ಈ ಸಂಧರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಆಶಾ ನಟರಾಜು, ಲೋಕೊಪಯೋಗಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿನಯಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಸಿ.ಕೆಂಪರಾಜು ,ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net