

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ಬಿ.ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಡಿ.22ಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಮುಂದೂಡಿದೆ.
ತಮ್ಮನ್ನು ಅವಧಿಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ನಿಯಮಬಾಹಿರ ಎಂದು ಆರೋಪಿಸಿ ಐಎಎ ಅಧಿಕಾರಿ ಬಿ.ಶರತ್ ಸಲ್ಲಿಸಿದ್ದ ಅರ್ಜಿ ಮಂಗಳವಾರ ಸಿಎಟಿ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭಲಿಂಗ ನಾವದಗಿ, ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿ, ಅವರ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ನಿಯೋಜಿಸಿದ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು. ನ್ಯಾಯಾಲಯ ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಡಿ.22ಕ್ಕೆ ನಿಗದಿಪಡಿಸಿತು.