ಡಿ.24 ರಂದು ಅರಮನೆ ಫಲಪುಷ್ಪ ಪ್ರದರ್ಶನ

dasara-flower-show-1
Published on

ಮೈಸೂರು: ಮೈಸೂರು ಅರಮನೆ ಮಂಡಳಿವತಿಯಿಂದ ಡಿ.24 ರಂದು ಸಂಜೆ 5 ಗಂಟೆಗೆ ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ  ಹಮ್ಮಿಕೊಳ್ಳಲಾಗಿದೆ.

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕಾರ್ಯಕ್ರಮವನ್ನು  ದ್ಘಾಟಿಸಲಿದ್ದಾರೆ.

ನರಸಿಂಹರಾಜ ಕ್ಷೇತ್ರದ ವಿಧಾನಸಭಾ ಸದಸ್ಯರಾದ ರಾಮ್ ದಾಸ್ ಅವರು ಅಧ್ಯಕ್ಷತೆಯನ್ನು ವಹಿಸುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರದ ಶಿವಕುಮಾರ್, ಮೈಸೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಪ್ರತಾಪ್‌ಸಿಂಹ, ಚಾಮರಾಜನಗರ ಕ್ಷೇತ್ರದ ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸ್ ಪ್ರಸಾದ್, ಮಂಡ್ಯ ಕ್ಷೇತ್ರ ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್, ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಶಾಸಕರುಗಳು ಹಾಗೂ ನಿಗಮ ಮಂಡಳಿ ಅಧ್ಯಕ್ಷರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net