ಡಿ. 4 ರಿಂದ 6ರವರೆಗೆ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ

Published on

ಚಾಮರಾಜನಗರ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯು ಜಿಲ್ಲೆಯಾದ್ಯಂತ ಡಿ. 4 ರಿಂದ 6 ವರೆಗೆ ಸಂಚರಿಸಿ ಕನ್ನಡ ನಾಡು, ನುಡಿ ಬಗ್ಗೆ ನಾಗರಿಕರಿಗೆ ಜಾಗೃತಿ ಮೂಡಿಸಲಿದೆ.

ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯು ಡಿ. 4ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲೆಯ ಹನೂರು ತಾಲೂಕಿನ ನರೀಪುರ ಕ್ರಾಸ್‌ನಿಂದ ಮಲೆ ಮಹದೇಶ್ವರ ಬೆಟ್ಟದ ರಸ್ತೆಯ ಮೂಲಕ ಹನೂರಿಗೆ ಆಗಮಿಸಿ, ಮಧ್ಯಾಹ್ನ 1 ಗಂಟೆಗೆ ಹನೂರಿನಿಂದ ನಿರ್ಗಮಿಸಲಿದೆ. ಮಧ್ಯಾಹ್ನ 2 ಗಂಟೆಗೆ ಹನೂರು ಮುಖ್ಯ ರಸ್ತೆಯಿಂದ ಕೊಳ್ಳೇಗಾಲಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದೆ.

ಡಿ.5ರಂದು ಬೆಳಗ್ಗೆ 9 ಗಂಟೆಗೆ ಕೊಳ್ಳೇಗಾಲದಿಂದ ಹೊರಡುವ ರಥಯಾತ್ರೆಯು ಬೆಳಿಗ್ಗೆ 10 ಗಂಟೆಗೆ ಯಳಂದೂರು ತಾಲೂಕಿಗೆ ಆಗಮಿಸಿ, ಸಂಜೆ 4 ಗಂಟೆಗೆ ಯಳಂದೂರಿನಿಂದ ನಿರ್ಗಮಿಸಲಿದೆ. ಸಂಜೆ 5 ಗಂಟೆಗೆ ಮುಖ್ಯ ರಸ್ತೆಯ ಮೂಲಕ ಚಾಮರಾಜನಗರಕ್ಕೆ ಆಗಮಿಸಿ, ವಾಸ್ತವ್ಯ ಹೂಡಲಿದೆ. ಡಿ.6ರಂದು ಬೆಳಗ್ಗೆ 9 ಗಂಟೆಗೆ ಚಾಮರಾಜನಗರದಿಂದ ಹೊರಡುವ ರಥಯಾತ್ರೆಯು ಬೆಳಗ್ಗೆ 10 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸಿ, ಬಳಿಕ ವಾಸ್ತವ್ಯ ಹೂಡಲಿದೆ. ಡಿ. 7ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಸರಗೂರು ಮೂಲಕ ರಥಯಾತ್ರೆಯು ಮೈಸೂರಿಗೆ ಪ್ರಯಾಣ ಬೆಳೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net