ಚಾಮರಾಜನಗರ: ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಹಿತರಕ್ಷಣ ಸಮಿತಿ ಸಭೆಯನ್ನು ಡಿ. 4ರಂದು ತಾಲೂಕು ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಈ ಸಭೆಗೆ ಸಮಿತಿಯ ಸದಸ್ಯರು/ಮುಖಂಡರುಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಬೇಕೆಂದು ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.