ಡಿ.ಕೆ.ಶಿವಕುಮಾರ ಕಲಬುರಗಿಗೆ 20ರಂದು

DK Shivkumar
Published on

ಕಲಬುರಗಿ: ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಸ್ಟ್ 20 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಅಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ. ಕಾಲೇಜಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆಯೋಜಿಸಲಾಗಿರುವ ರಾಜೀವ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಧ್ಯಾಹ್ನ 2 ಗಂಟೆಗೆ ಮರಳಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net