

ಡಿ.ಕೆ.ಶಿವಕುಮಾರ ರಾಜಿನಾಮೆಗೆ ಬಿಜೆಪಿ ಒತ್ತಾಯ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಸಂವಿಧಾನ ಬದಲಿಸುವ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮಾತನಾಡಿದ್ದಾರೆ ಎನ್ನಲಾದ ಹೇಳಿಕೆ ಖಂಡಿಸಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ ಅವರ ಅಣುಕು ಶವಯಾತ್ರೆ ನಡೆಸಿ ರಾಜಿನಾಮೆಗೆ ಒತ್ತಾಯಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ ಸಂವಿಧಾನ ಬದಲಿಸುವ ಕುರಿತು ಮಾತನಾಡುವ ಮೂಲಕ.ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಕೂಡಲೇ ಡಿ.ಕೆ.ಶಿವಕುಮಾರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಕಾಯ ರ್ುಕರ್ತರು ಆಗ್ರಹಿಸಿದರು.
ಮೊದಲಿನಿಂದಲೂ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗ ಮತ್ತೆ ಮುಸ್ಲಿಂರ ಮತಕ್ಕಾಗಿ ಸಂವಿಧಾನ ಬದಲಿಸುವ ಕುರಿತು ಮಾತನಾಡುವ ಮೂಲಕ ಸಂವಿಧಾನ ವಿರೋಧಿಯಾಗಿದೆ. ಬಿಜೆಪಿ ಮೇಲೆ ಸಂವಿಧಾನ ಬದಲಿಸುವ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರ ಬಣ್ಣ ಬಯಲಾಗಿದೆ ಎಂದು ಆರೋಪಿಸಿದರು.
ಮುರಗೇಂದ್ರಗೌಡ ಪಾಟೀಲ, ಡಾ.ರವಿ ಪಾಟೀಲ, ಉಜ್ವಲಾ ಬಡವನಾಚೆ, ಜ್ಯೋತಿ ಶೆಟ್ಟಿ, ಇಂದಿರಾ ಬಾಳಿಕಾಯಿ,ಶ್ರೀನಿವಾಸ ಬಿಸನಕೊಪ್ಪ ಇತರರಿದ್ದರು.