ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಪ್ರತಿಭಟನೆ

11
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಗ್ರರ ಪರ ನಿಲುವು ತಾಳಿದ್ದಾರೆ ಎಂದು ಆರೋಪಿಸಿ ಹು-ಧಾ ಬಿಜೆಪಿ ಮಹಾನಗರ ಘಟಕದಿಂದ ನಗರದ ಜ್ಯುಬಿಲಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ವೋಟರ್ ಐಡಿ ಹಗರಣವನ್ನು ಮರೆಮಾಚಲು ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣವನ್ನು ಮುನ್ನಲೆಗೆ ತರಲಾಗಿದೆ ಎಂದು ಶಿವಕುಮಾರ್ ಹೇಳಿದ್ದರು. ಇದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದರು.
ಇಲ್ಲಿನ ಜ್ಯುಬಿಲಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುತ್ತಿದೆ. ಈ ಮೂಲಕ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಕ್ ಉಗ್ರರೊಂದಿಗೆ ನಂಟು ಹೊಂದಿದ್ದಾನೆ ಎಂದು ರಾಷ್ಟ್ರೀಯ ಭದ್ರತಾ ದಳದ ತನಿಖೆಯಲ್ಲಿ ತಿಳಿದುಬಂದಿದೆ. ಆದಾಗ್ಯೂ ಶಿವಕುಮಾರ್ ಉಗ್ರರ ಪರ ನಿಲುವು ಹೊಂದಿದ್ದು, ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದಾರೆ ಎಂದು ೋಷಣೆ ಕೂಗಿದರು.
ಇದೇವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮಾತನಾಡಿದ ಪಾಕಿಸ್ತಾನ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಿಪ್ಪಣ್ಣ ಮಜ್ಜಗಿ, ಶಿವು ಹಿರೇಮಠ, ವಿಜಯಾನಂದ ಶೆಟ್ಟಿ, ಜ್ಯೋತಿ ಪಾಟೀಲ, ಸುಜಾತಾ ಕಳ್ಳಿಮನಿ, ನೀಲವ್ವ ಅರವಾಳದ, ದತ್ತಮೂರ್ತಿ ಕುಲಕರ್ಣಿ, ಬಸವರಾಜ ಗರಗ, ಶಂಕರ ಶೇಳಕೆ, ಮೋಹನ ರಾಮದುರ್ಗ, ಸುನೀಲ ಮೋರೆ,  ಚಂದ್ರಶೇಖರ ಮನಗುಂಡಿ, ರಾಮಚಂದ್ರ ಪೊದೊಡ್ಡಿ, ಸಂತೋಷ ದೇವರೆಡ್ಡಿ, ಬಸವರಾಜ ರುದ್ರಾಪುರ, ಸಿದ್ದು ಕಲ್ಯಾಣಶಟ್ಟಿ, ವಿನಾಯಕ ಗೊಂದಳಿ, ಮಂಜುನಾಥ ರೇಣಕೆ, ಸಂತೋಷ ಎಸ್ ಎಂ, ಸುಜಾತಾ ಕಳ್ಳಿಮನಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net