ಡಿ. ದೇವರಾಜ್ ಅರಸು ಜನ್ಮ ದಿನಾಚರಣೆ ನಾಳೆ

D. Devaraj Arasu's birthday is tomorrow
ಡಿ. ದೇವರಾಜ್ ಅರಸು
Published on

ವಿಜಯಪುರ: ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆ. 20 ರಂದು ಮಾಜಿ ಸಿಎಂ ದಿ. ಡಿ. ದೇವರಾಜ್ ಅರಸು ಅವರ 108ನೇ ಜನ್ಮ ದಿನಾಚರಣೆ ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಗ್ಗೆ 9 ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ದಿವಂಗತ ಡಿ. ದೇವರಾಜ್ ಅರಸು ಅವರ ಭಾವಚಿತ್ರ ಮೆರವಣಿಗೆ ಹಾಗೂ ಬೆಳಗ್ಗೆ 10 ಕ್ಕೆ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದೆ. ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಲಿದ್ದಾರೆ.

ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ವಿಶೇಷ ಉಪನ್ಯಾಸಕರಾಗಿ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಮಹೇಶ ಅಂಜುಟಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net