

ಬಾಗಲಕೋಟೆ: ಜಿಲ್ಲೆಯಲ್ಲಿ ಸ್ಥಾಪಿಸಲಾದ ೧೮ ಪರೀಕ್ಷಾ ಕೇಂದ್ರಗಳಲ್ಲಿ ಡಿ.೨೯ ರಂದು ಕೆ.ಪಿ.ಎಸ್.ಸಿ ಆಯೋಗವು ಅಽಸೂಚಿಸಿರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಶಾಂತ ಹಾಗೂ ಸುಗಮವಾಗಿ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಽಕಾರಿ ಜಾನಕಿ ಕೆ.ಎಂ ಹೇಳಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರÀ ಜರುಗಿದ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಗಲಕೋಟೆ ನಗರದಲ್ಲಿ ಇರುವ ಸರ್ಕಾರಿ ಮತ್ತು ಖಾಸಗಿ ಶಾಲಾ, ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಕೆಪಿಸಿಸಿ ಆಯೋಗದವರು ಆಯ್ಕೆ ಮಾಡಿದ್ದಾರೆ. ಒಟ್ಟು ೧೮ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು ೬೬೦೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎರಡು ಅವಽಯಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೧೨ ವರೆಗೆ, ಎರಡನೇ ಅವಽ ಮಧ್ಯಾಹ್ನ ೨ ರಿಂದ ಸಂಜೆ ೪ ವರೆಗೆ ನಡೆಯಲಿದೆ ಎಂದರು.
ಪ್ರಶ್ನೆ ಪತ್ರಿಕೆ ಬಂಡಲ್‌ಗಳನ್ನು ಜಿಲ್ಲಾ ಖಜಾನೆಯಿಂದ ಪಡೆದು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಒಟ್ಟು ೬ ಮಾರ್ಗಾಽಕಾರಿಗಳನ್ನು ನೇಮಕ ಮಾಡಲಾಗಿದ್ದು, ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಕಾರ್ಯವಾಗಬೇಕು. ಮಾರ್ಗಾಽಕಾರಿಗಳೊಂದಿಗೆ ಪೊಲೀಸ್ ಸಿಬ್ಬಂದಿಗಳನ್ನು ಸಹ ನೇಮಿಸಲು ಕ್ರಮಕೈಗೊಳ್ಳಲಾಗುವುದು. ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸ್ಥಾನಿಕ ಜಾಗೃತ ದಳದ ಅಽಕಾರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.
ಪ್ರತಿಯೊಂದು ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಬಂದೋಬಸ್ತವಾಗಿ ಪೊಲೀಸ್ ಪೇದೆಗಳನ್ನು ನಿಯೋಜಿಸಲಾಗುತ್ತಿದೆ. ಮೂರು ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಎ ವೃಂದದ ಅಽಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶಿಸಲಾಗುತ್ತಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ ೨೦೦ ಮೀಟರ್ ಪ್ರದೇಶವನ್ನು ನಿಷೇತ ಪ್ರದೇಶವೆಂದು ಘೋಷಿಸಲಾಗುತ್ತಿದೆ ಎಂದು ತಿಳಿಸಿದರು.
ಸಿಸಿಟಿವಿ, ಬಾಡಿ ಕ್ಯಾಮರಾ, ಜಾಮರ, ಪ್ರಿಸ್ಕಿಂಕ್, ಫೇಸ್ ರಿಕಾಗ್ನಾಷನ್ ಕಾರ್ಯವನ್ನು ಕೆ.ಪಿ.ಎಸ್.ಸಿ ಇಲಾಖೆ ನೇಮಕಗೊಳಿಸಿದ ಏಜೆನ್ಸಿಯವರು ಮಾಡುತ್ತಿದ್ದಾರೆ. ಈ ಕಾರ್ಯ ಸಮರ್ಪಕವಾಗಿ ನಿರ್ವಹಿಸಿದ ಬಗ್ಗೆ ನಿಗಽಗೊಳಿಸಿದ ನಮೂನೆಯಲ್ಲಿ ಭರ್ತಿ ಮಾಡಿ ಮುಖ್ಯ ಅಽÃಕ್ಷಕರು ಹಾಗೂ ಸ್ಥಳೀಯ ನಿರೀಕ್ಷಣಾಽಕಾರಿಗಳು ಜಂಟಿಯಾಗಿ ಪರಿಶೀಲನೆ ಮಾಡಿ ದೃಢೀಕರಿಸುವ ಕಾರ್ಯವಾಗಬೇಕು ಎಂದರು.
ಪರೀಕ್ಷಾ ಕೇಂದ್ರ ಸಂಖ್ಯೆ ೧ ರಲ್ಲಿ ೧೨೦ ವಿಕಲಚೇತನ ಅಭ್ಯರ್ಥಿಗಳು ಹಾಗೂ ೨೦ ಅಂಧ ಪರೀಕ್ಷಾರ್ಥಿಗಳು (ಸ್ಟೆÊಬ್) ಸಹಾಯಕರೊಂದಿಗೆ ಪರೀಕ್ಷೆಗೆ ಹಾಜರಾಗಲಿದ್ದು, ಅವರಿಗೆ ಮುಖ್ಯ ಅಽÃಕ್ಷಕರು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಬೆಂಚ್ ಮಾರ್ಕ ಹೊರಡಿಸಿದ ಅಂಗವಿಕಲರಿಗೆ ಪ್ರತಿ ಗಂಟೆಗೆ ೨೦ ನಿಮಿಷದಂತೆ ಹೆಚ್ಚುವರಿ ಕಾಲಾವಕಾಶವನ್ನು ನಿಯಮಾನುಸಾರ ನೀಡಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ವಿವೇಕಾನAದ, ಖಜಾನೆ ಇಲಾಖೆಯ ಉಪನಿರ್ದೇಶಕ ಶರಣಬಸಪ್ಪ ಕುಂಬಾರ, ಪರೀಕ್ಷಾ ನೋಡಲ್ ಅಽಕಾರಿ ಎಸ್.ಜಿ.ಮಿರ್ಜಿ, ಶಾಲಾ ಶಿಕ್ಷಣ ಇಲಾಖೆಯ ಹಾಲವರ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯ ಅಽÃಕ್ಷಕರು ಉಪಸ್ಥಿತರಿದ್ದರು.