ಡಿಎಚ್ಒ ಮನೆ ಮೇಲೆ ಲೋಕಾ ದಾಳಿ

05ydg06
Published on


ಯಾದಗಿರಿ: ಅಕ್ರಮ ಆಸ್ತಿ ಗಳಿಗೆ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ನಗರದಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಮನೆ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲಾತಿಗಳನ್ನು ಪರಿಶೀಲಿಸಿದರು.

ಡಾ.ಪ್ರಭುಲಿಂಗ ಇತ್ತೀಚೆಗಷ್ಟೇ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಜಿಲ್ಲೆಗೆ ನಿಯೋಜನೆಗೊಂಡಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಸ್ವಂತ ಮನೆ ಕಲಬುರಗಿಯಲ್ಲಿದ್ದು, ಲೋಕಾ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದರು. ಸತತ ಎರಡು ಗಂಟೆಗಳಿಂದ ವಿವಿಧ ದಾಖಲೆ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net