ಡಿಕೆಶಿ ಪದಗ್ರಹಣಕ್ಕೆ ಸಕಲ ಸಿದ್ಧತೆ

1 NRD-1
Published on

ನರಗುಂದ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡಿ.ಕೆ. ಶಿವಕುಮಾರ ಹಾಗೂ ಮೂವರು ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವೀಕ್ಷಣೆಗೆ ತಾಲೂಕಿನಾದ್ಯಂತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಸದಸ್ಯ, ವೀಕ್ಷಕ ಸಂಗಮೇಶ ಬಬಲೇಶ್ವರ ಹೇಳಿದರು.

ಪಟ್ಟಣದ ಅಳಗವಾಡಿ ರಸ್ತೆಯಲ್ಲಿರುವ ಮಲಪ್ರಭಾ ಕೋ ಆಯಿಲ್ ಮಿಲ್​ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಡಿ.ಕೆ. ಶಿವಕುಮಾರ ಪ್ರತಿಜ್ಞಾ ವಿಧಿ ಕಾರ್ಯಕ್ರಮ ವೀಕ್ಷಣೆಗೆ ಕಂಟೇನ್ಮೆಂಟ್ ಹಾಗೂ ಸೀಲ್​ಡೌನ್ ಪ್ರದೇಶಗಳನ್ನು ಹೊರತುಪಡಿಸಿ ನರಗುಂದ ಮತಕ್ಷೇತ್ರದ 36 ಗ್ರಾಮ ಪಂಚಾಯಿತಿ ಹಾಗೂ ನರಗುಂದ ಪಟ್ಟಣದ ಎಲ್ಲ 23 ವಾರ್ಡ್​ಗಳಲ್ಲಿ ಈಗಾಗಲೇ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಕೋವಿಡ್-19 ಮುಂಜಾಗ್ರತ ಕ್ರಮವಾಗಿ ಪ್ರತಿಯೊಂದು ಗ್ರಾ.ಪಂ. ವ್ಯಾಪ್ತಿಯಲ್ಲಿ 50 ಜನ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಜ್ಯೂಮ್ ಆಪ್ ಮೂಲಕ ಕಾರ್ಯಕ್ರಮ ವೀಕ್ಷಣೆ ಮಾಡಲಿದ್ದಾರೆ. ಇದು ದೇಶದ ಇತಿಹಾಸದಲ್ಲಿಯೇ ಮೊದಲು. ಮಾಜಿ ಸಚಿವ ಬಿ.ಆರ್. ಯಾವಗಲ್ಲ ಅವರ ಅಧ್ಯಕ್ಷತೆಯಲ್ಲಿ ನರಗುಂದದ ಆಯಿಲ್ ಮಿಲ್​ನಲ್ಲಿ ತಾಲೂಕು ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ, ಕಿರಿಯ ಕಾರ್ಯಕರ್ತರು, ಮುಖಂಡರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಿ ಪರಸ್ಪರ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ನರಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಯಾವಗಲ್ಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜು ಕಲಾಲ ಮಾತನಾಡಿದರು.

ಉದಯಗೌಡ ವೀರನಗೌಡ್ರ, ವಿಜಯ ಚಲವಾದಿ, ಪ್ರಕಾಶ ಹಡಗಲಿ, ವಿಷ್ಣು ಸಾಠೆ, ರಾಜು ಮುಳಿಕ, ಐ.ಪಿ. ಚಂದೂನವರ, ವೆಂಕಟೇಶ ಮೇಟಿ, ನವೀನ ಗೋವೇಶ್ವರ, ಕಿರಣ ಹಡಗಲಿ, ಮುತ್ತು ತೋರಗಲ್ಲ ಇತರರಿದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net