ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ; ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

BDVT WEB
Published on

ಭದ್ರಾವತಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಖಂಡಿಸಿ ತಾಲೂಕು ಬಿಜೆಪಿ ಘಟಕದ ಮುಖಂಡರು, ಕಾರ್ಯಕರ್ತರು ಮಾಧವಾಚಾರ್ ವೃತ್ತದಲ್ಲಿ ಮಂಗಳವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಮುಖಂಡರು ಕೇವಲ ಮತ ಗಳಿಕೆಗೆ ಮನಬಂದಂತೆ ಹೇಳಿಕೆ ಕೊಡುವ ಮೂಲಕ ಪರೋಕ್ಷವಾಗಿ ಭಯೋತ್ಪಾದನೆಯನ್ನು ಬೆಂಬಲಿಸುವಂತಿದೆ. ಸ್ಫೋಟದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಿ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಟೀಕೆ ಮಾಡುತ್ತ ಉದ್ಧಟತನ ತೋರುತ್ತಿರುವ ಡಿ.ಕೆ.ಶಿವಕುಮಾರ್ ಯಾರೆಂಬುದು ಈ ರಾಜ್ಯದ ಪ್ರತಿಯೊಬ್ಬರಿಗೂ ತಿಳಿದಿದೆ. ಅಲ್ಪಸಂಖ್ಯಾತರ ಮತ ಓಲೈಕೆಗಾಗಿ ರಾಣಕಾರಣ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಚುನಾವಣೆಯಲ್ಲಿ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ನಗರದಲ್ಲಿಯೂ ಅಲ್ಪಸಂಖ್ಯಾತರ ಮತಗಳಿಗಾಗಿ ಟಿಪ್ಪು ಸುಲ್ತಾನ್ ಪ್ರತಿಮೆ ಸ್ಥಾಪಿಸುವುದಾಗಿ ಹಾಗೂ ವೃತ್ತಕ್ಕೆ ಟಿಪ್ಪು ಸರ್ಕಲ್ ಎಂದು ನಾಮಕರಣ ಮಾಡುವುದಾಗಿ ಕಾಂಗ್ರೆಸ್ ಪಕ್ಷದ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಟಿಪ್ಪು ಪ್ರತಿಮೆ ನಿರ್ಮಾಣವಾದರೆ ಹಿಂದು ಪರ ಸಂಘಟನೆಗಳು ತಕ್ಕ ಉತ್ತರ ನೀಡಲಿದ್ದೇವೆ ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net