ಡಿಕೆಶಿ ಹೇಳಿಕೆ ಖಂಡಿಸಿ ಹೆದ್ದಾರಿ ತಡೆ; ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

HHR WEB
Published on

ಹೊಳೆಹೊನ್ನೂರು: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಶಂಕಿತ ಉಗ್ರನ ಪರ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಮೀಪದ ಅರಹತೊ ಳಲು ಕೈಮರದಲ್ಲಿ ಮಂಗಳವಾರ ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹೊಳೆಹೊನ್ನೂರು ಬಿಜೆಪಿ ಮಂಡಲ ಅಧ್ಯಕ್ಷ ಡಿ.ಮಂಜುನಾಥ್ ಕಲ್ಲಜ್ಜನಾಳ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ನಾಚಿಕೆಗೇಡಿನ ಓಲೈಕೆ ರಾಜಕೀಯ ಮಾಡಿಕೊಂಡು ಬರುತ್ತಿದ್ದಾರೆ ಎಂದು ದೂರಿದರು.

ಶಂಕಿತ ಉಗ್ರ ಶಾರಿಕ್ ಪರ ಹೇಳಿಕೆ ನೀಡುವ ಡಿ.ಕೆ.ಶಿವಕುಮಾರ್ ಅವರ ವರ್ತನೆ ಗಮನಿಸಿದರೆ ರೌಡಿಗಳು ರೌಡಿಗಳನ್ನು ಬೆಂಬಲಿಸುತ್ತಾರೆಂಬುದು ರಾಜ್ಯದ ಜನತೆ ಮುಂದೆ ಮತ್ತೊಮ್ಮೆ ಸಾಬೀತಾಗಿದೆ ಎಂದರು.

ಸುಭದ್ರ ಆಡಳಿತ ಬಿಜೆಪಿಯಿಂದ ಮಾತ್ರ ಸಾಧ್ಯ. ಮತ ಬ್ಯಾಂಕ್ ಗಟ್ಟಿಗೊಳಿಸಿಕೊಳ್ಳಲಿ ಅಹಿಂದ ಓಲೈಕೆಗೆ ಮುಂದಾಗುವ ಕಾಂಗ್ರೆಸ್ ನಾಯಕರು, ಚುನಾವಣೆ ಮುಗಿದ ಬಳಿಕ ಅವರತ್ತ ಕಣ್ಣೆತ್ತಿಯೂ ನೋಡುವುದಿಲ್ಲ. ದೇಶದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಿರುವುದನ್ನು ಸಹಿಸಿಕೊಳ್ಳಲಾಗದ ಪ್ರತಿಪಕ್ಷಗಳು ಪ್ರಧಾನಿ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡಿ ಬಾಯಿ ಚಪಲ ತೀರಿಸಿಕೊಳ್ಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸುಳ್ಳು ಆರೋಪಗಳನ್ನು ನಂಬುವುದಕ್ಕೆ ರಾಜ್ಯದ ಜನತೆ ದಡ್ಡರಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net