

ಬೆಳಗಾವಿ: ಜಿಲ್ಲಾ ಆಡಳಿತ ತರಬೇತಿ ಸಂಸ್ಥೆ (ಡಿಟಿಐ) ಪ್ರಥಮ ದರ್ಜೆ ಅಧಿಕಾರಿಯೊಬ್ಬರು ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಆಜಂನಗರದ ಜಾಫರ್ ಫೀರ್ಜಾದೆ (39) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಸೋಮವಾರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಎಪಿಎಂಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.