ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ

application
Published on

ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕಾಗಿ 44 ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾ ನಿಸಲಾಗಿದೆ. ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ-22, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ-17, ಎಸ್‌ಪಿ ಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನೆಲ್ಲೂರು ವೆಂಕಟಗಿರಿ-3 ಹಾಗೂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು-2 ಅಭ್ಯರ್ಥಿಗಳ ಮೆರಿಟ್ ಆಧರಿಸಿ ಪ್ರವೇಶ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿಗಳಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು. ಅರ್ಜಿಗಳನ್ನು ಮೇ 15ರೊಳಗಾಗಿ ಚಿತ್ರದುರ್ಗ ಕಚೇರಿ ಅಥವಾ 31 ರೊಳಗೆ ಗದಗ ಜಿಲ್ಲೆ ನರಸಾಪುರ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪ್ರಾಂಶುಪಾಲರಿಗೆ ನೇರವಾಗಿ ಸಲ್ಲಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net