ಡಿವೈಎಸ್‌ಪಿ ಮಿಥುನ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಡಿವೈಎಸ್‌ಪಿ ಮಿಥುನ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ
Published on

 ಹಾಸನ: ಸಕಲೇಶಪುರ ಡಿವೈಎಸ್‌ಪಿ ಮಿಥುನ್ ಹಿಂದೂಪರ ಸಂಘಟನೆಯ ಯುವಕನಿಗೆ ಥಳಿಸಿ ಚಿತ್ರ ಹಿಂಸೆ ನೀಡಿ ಮಾನಸಿಕವಾಗಿ ತೊಂದರೆ ನೀಡುತ್ತಿರುವ ಅಧಿಕಾರಿಯ ವಿರುದ್ಧ ತನಿಖೆ ನಡೆಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಪ್ರೀತಂಗೌಡ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಣೆಗೊಂಡ ಬಿಜೆಪಿ ಕಾರ್ಯಕರ್ಯರು ಪೊಲೀಸ್ ಅಧಿಕಾರಿ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರ ಇದರ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಜಿಲ್ಲಾ

ಡಿವೈಎಸ್‌ಪಿ ಮಿಥುನ್ ಅವರು ಹಿಂದೂಪರ ಸಂಘಟನೆ ಮುಖಂಡ ರಘು ಸಕಲೇಶಪುರ ಪ್ರಕರಣದ ಸಂಬಂಧ ಹಿಂದೂ ಸಂಘಟನೆ ಕಾರ್ಯಕರ್ತ ಅವಿನಾಶ್ ಎಂಬಾತನ ಮನೆಗೆ ಬಂದು, ಯಾವುದೇ ಮಾಹಿತಿ ನೀಡದೆ ಏಕಾಏಕಿ ಅತನನ್ನು ಎಳೆದುಕೊಂಡು ಹೋಗಿ ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಥಳಿಸಿ, ಮಾನಸಿಕ ಹಾಗು ದೈಹಿಕವಾಗಿ ಹಿಂಸೆ ನೀಡಿದ್ದಾರೆ ಎಂದು ದೂರಿದರು.

ಅವಿನಾಶ್ ಪ್ರಶ್ನೆ ಮಾಡಿದಾಗ ವಿವಾದಾದ್ಮತ ಹೇಳಿಕೆ ನೀಡಿರುವ ರಘು ಸಕಲೇಶಪುರ ಎಲ್ಲಿ ಸಿಗುತ್ತಾರೆ ಹೇಳು ಎಂದು ಬೆದರಿಸಿದ್ದಾರೆ.ನನಗೆ ಏನೂ ಗೊತ್ತಿಲ್ಲ ಎಂದು ಹೇಳಿದ್ದಕ್ಕೆ ಲಾಠಿಯಿಂದ ಮನಬಂದಂತೆ ಥಳಿಸಿದ್ದಾರೆ. ಪೊಲೀಸರ ಹಲ್ಲೆಯಿಂದ ಅವಿನಾಶ್ ದೇಹದ ವಿವಿಧ ಭಾಗಗಳಿಗೆ ಪೆಟ್ಟಾಗಿದೆ. ಇಷ್ಟೇ ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದರು.

ಹಲ್ಲೆ ಘಟನೆ ಬಗ್ಗೆ ಹೊರಗಡೆ ಬಾಯಿ ಬಿಡದಂತೆ ಬೆದರಿಕೆ ಹಾಕಿ, ಖಾಲಿ ಹಾಳೆಯ ಮೇಲೆ ಸಹಿ ಪಡೆದಿದ್ದಾರೆ. ಸಂಬಂಧವೇ ಇಲ್ಲದ ವಿಷಯದಲ್ಲಿ ಅಕ್ರಮವಾಗಿ ಕರೆದೊಯ್ದು ಅಮಾನವೀಯವಾಗಿ ಮತ್ತು ನಿರ್ದಾಕ್ಷಿಣ್ಯವಾಗಿ ಥಳಿಸಿ, ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಹಿಂದೂ ಪರ ಸಂಘಟನೆ ಮುಖಂಡ ರಘು ಸಕಲೇಶಪುರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್, ಚಿಕ್ಕಮಗಳೂರು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್, ಹಾಸನ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅನೂಪ್ ರಾಜ್, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಹರ್ಷಿತ್, ಬೇಲೂರು ಮಂಡಲ ಅಧ್ಯಕ್ಷ ನವೀನ್ ಹಳ್ಳಿ ಸುಮನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಹಿತ್ ಜಂಬರಡಿ, ಪ್ರವೀಣ್, ನಿಖಿತ್, ಅವಿನಾಶ್, ನಗರ ಪ್ರಧಾನ ಕಾರ್ಯದರ್ಶಿ ಮುರುಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net