ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ

tmk-protest
Published on

ಹಂದ್ರಾಳು ನಾಗಭೂಷಣ್ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಸಂಚಾಲಕ

ಚಿಕ್ಕನಾಯಕನಹಳ್ಳಿ ಹಕ್ಕಿಪಿಕ್ಕಿ ಕಾಲನಿಯ ಜನರಿಗೆ ಸರ್ಕಾರ ಜಾಗ ನೀಡಿದ್ದರೂ, ತಾಲೂಕು ಆಡಳಿತ ಇದುವರೆಗೂ ಹಕ್ಕುಪತ್ರ ವಿತರಿಸಿಲ್ಲ, ಕೇಳಲು ಹೋದ ಕುಟುಂಬಗಳ ವಿರುದ್ಧ ಅಲ್ಲಿನ ತಹಸೀಲ್ದಾರ್ ಅವಾಚ್ಯವಾಗಿ ನಿಂದಿಸಿದ್ದಾರೆ. ಈ ಬಗ್ಗೆ ಆಟ್ರಾಸಿಟಿ ದೂರು ದಾಖಲಾಗಿದ್ದರೂ ಯಾವುದೇ ಕಾನೂನು ಕ್ರಮ ಜರುಗಿಸಿಲ್ಲ.

ಪ್ರತಿಭಟನಾನಿರತರಾದ ಜೆಸಿಬಿ ವೆಂಕಟೇಶ್, ರಾಜೇಶ್ ದೊಡ್ಡಮನೆ, ಮೋಹನ್ ಕುಮಾರ್ ಇದ್ದರು.

ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿ, ಚಾತಕ ಪಕ್ಷಿಯಂತೆ ಕಾಯುತ್ತಿರುವ ಜನರಿಗೆ ಯಾವುದೇ ಉಪಯೋಗವಿಲ್ಲದಂತಾಗಿದೆ ಹಾಗಾಗಿ, ಮಾಡು, ಇಲ್ಲವೆ ಮಡಿ ಎಂಬ ಹೋರಾಟಕ್ಕಾಗಿ ಮುಂದಾಗಿದ್ದೇವೆ, ನಮಗೆ ಶಾಮಿಯಾನಕ್ಕೆ ದುಡ್ಡು ಕಟ್ಟಲಾಗುತ್ತಿಲ್ಲ. ಮುಂದಿನ ವಾರದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುಡಿಸಲು ಹಾಕಿ ವಾಸಿಸುವ ಮೂಲಕ ಪ್ರತಿಭಟನೆ ಮುಂದುವರಿಸುತ್ತೇವೆ ಎಂದರು.

ಅಮ್ಮನಘಟ್ಟದ ದಲಿತ ಕುಟುಂಬಕ್ಕೆ ಅರಣ್ಯ ಇಲಾಖೆಯವರು ಇನ್ನಿಲ್ಲದ ತೊಂದರೆ ನೀಡುತ್ತಿದ್ದಾರೆ, ರೈತರು ಜಮೀನಿನಲ್ಲಿ ಬೆಳೆಸಿದ್ದ ತೆಂಗು,ಅಡಿಕೆ, ಬೇವು ಇನ್ನಿತರ ಫಲ ನೀಡುವ ಸಸಿಗಳನ್ನು ಕಿತ್ತು ದೌರ್ಜನ್ಯ ಎಸಗಿದ್ದಾರೆ. ಪ್ರಶ್ನಿಸಿದರೆ, ಬಂಧಿಸುವ ಬೆದರಿಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಕುತ್ತಿದ್ದಾರೆ ಎಂದು ಹಂದ್ರಾಳು ನಾಗಭೂಷಣ್ ದೂರಿದರು.

ಜಿಲ್ಲೆಯ ವಿವಿಧೆಡೆ ವಸತಿ ಮತ್ತು ಭೂಮಿ ರಹಿತ ಹೋರಾಟಗಾರರು ಒಂದೆಡೆ ಸೇರಿ, ಬಗರ್ ಹುಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಜನರಿಗೆ ಕೂಡಲೇ ಸಾಗುವಳಿ ಚೀಟಿ ಬಿಡುಗಡೆ ಮಾಡಬೇಕು. ದಲಿತ ವಿರೋಧಿ ಧೋರಣೆ ಹೊಂದಿರುವ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ತೇಜಸ್ವಿನಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಸಂಚಾಲಕ ಹಂದ್ರಾಳು ನಾಗಭೂಷಣ್ ನೇತೃತ್ವದಲ್ಲಿ ಮಾ.21ಪ್ರತಿಭಟನೆ ನಡೆಸಲಾಗುತ್ತಿದೆ. ಹತ್ತಕ್ಕೂ ಹೆಚ್ಚು ಕುಟುಂಬದ ಸದಸ್ಯರು, ಕುರಿ, ಮೇಕೆಗಳೊಂದಿಗೆ ಸ್ಥಳದಲ್ಲಿಯೇ ಅಡುಗೆ ತಯಾರಿಸಿ, ಊಟೋಪಚಾರ ಮಾಡುವ ಮೂಲಕ ಹೋರಾಟ ಮುಂದುವರಿಸಿದ್ದಾರೆ.

ಇಡೀ ಜಿಲ್ಲೆಯಲ್ಲಿಯೇ ಬಗರ್ ಹುಕುಂ ಸಮಿತಿಯ ಸಭೆಗಳು ಸರಿಯಾಗಿ ಆಗುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸುತ್ತೇನೆ. ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲವಿದೆ, ಭೂಮಿ ಮತ್ತು ವಸತಿ ರಹಿತರಿಗೆ ಅದ್ಯತೆಯ ಮೇಲೆ ಸೂರು ಒದಗಿಸುವುದು ಮತ್ತು ಈಗಾಗಲೇ ಬಗರ್‌ಹುಕ್ಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಆರ್.ರಾಜೇಂದ್ರ ಹೇಳಿದರು.

ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿ, ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಿದರು.

ಭೂಮಿ ಮತ್ತು ವಸತಿ ವಂಚಿತ ಸಮುದಾಯ ಹಾಗೂ ಭ್ರಷ್ಟಾಚಾರ ನಿಮೂರ್ಲನ ವೇದಿಕೆ ವತಿಯಿಂದ ಭೂಮಿ ಮತ್ತು ವಸತಿ ಹಕ್ಕಿಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಬುಧವಾರ 17ನೇ ದಿನ ಪೂರೈಸಿತು.

ವಿಜಯವಾಣಿ ಸುದ್ದಿಜಾಲ ತುಮಕೂರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net