

ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಎಂಎಲ್‌ಸಿ ಕೆ.ಎಸ್.ನವೀನ್ ಮಾತನಾಡಿದರು. ಜಿಪಂ ಸಿಇಒ ಡಾ.ಎಸ್.ಆಕಾಶ್, ಎಸ್‌ಪಿ ರಂಜಿತ್ ಕುಮಾರ ಬಂಡಾರು, ಡಿಸಿ ಬಿ.ಟಿ.ಕುಮಾರಸ್ವಾಮಿ, ಎಸಿ ಮೆಹಬೂಬ್ ಜಿಲಾನಿ ಖುರೇಷಿ, ಡಿಯುಡಿಸಿ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ, ನಗರ ಸಭೆ ಪೌರಾಯುಕ್ತೆ ಎಂ.ರೇಣುಕಾ ಇದ್ದರು.
ಈ ಪೈಕಿ ರಸ್ತೆ ಒತ್ತುವರಿ ಕಟ್ಟಡಗಳು, ಟ್ರೇಡ್ ಲೈಸೆನ್ಸ್ ಸೇರಿ ನಿಯಮಗಳ ಉಲ್ಲಂಘನೆ ಕುರಿತು ಮಾಹಿತಿ ನೀಡಿದರು. ನಿಯಮಗಳ ಉಲ್ಲಂಘನೆ ಕಟ್ಟಡಗಳನ್ನು ತ್ವರಿತ ತೆರವುಗೊಳಿಸಿ, ಅಗಲೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಚಿವರು, ನಗರದ ಅಭಿವೃದ್ಧಿ ದೃಷ್ಟಿಯಿಂದ ರಸ್ತೆ ಅಗಲೀಕರಣ ಆಗಲೇಬೇಕೆಂದು ಹೇಳಿದರು.
ಚಿತ್ರದುರ್ಗ ನಗರದ ಪ್ರಮುಖ ರಸ್ತೆಯನ್ನು ಎರಡು ಹಂತಗಳಲ್ಲಿ ಅಗಲೀಕರಣಗೊಳಿಸುವ ಕುರಿತಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಪ್ರವಾಸಿ ಮಂದಿರ ವೃತ್ತದಿಂದ ಗಾಂಧಿವೃತ್ತದವರೆಗೆ ಮೊದಲ ಹಂತ ಹಾಗೂ ಗಾಂಧಿ ವೃತ್ತದಿಂದ ಕನಕ ವೃತ್ತದವರೆಗೆ 2ನೇ ಹಂತದಲ್ಲಿ ರಸ್ತೆಯ ಮಧ್ಯಭಾಗದಿಂದ ಕನಿಷ್ಠ 25 ಮೀಟರ್ ರಸ್ತೆ ಅಗಲೀಕರಣಕ್ಕೆ ಉದ್ದೇಶಿಸಲಾಗಿದೆ. ಈ ಭಾಗದ 400ಕ್ಕೂ ಹೆಚ್ಚು ವಾಣಿಜ್ಯ ಹಾಗೂ ಇತರ ಆಸ್ತಿಗಳ ಪ್ರತಿ ಕಡತ ಸಿದ್ಧಪಡಿಸಲಾಗಿದೆ ಎಂದರು.
ರಸ್ತೆ ಅಗಲೀಕರಣ:
ನಗರದ ಒಳಗೆ ಡಿಸಿ ಕಚೇರಿ ನಿರ್ಮಿಸಲು ಜಿಲ್ಲಾಧಿಕಾರಿ ವಸತಿ ಗೃಹ ಹಿಂಭಾಗ, ತೋಟಗಾರಿಕೆ, ಲೋಕೋಪಯೋಗಿ ಇಲಾಖೆ ವಸತಿ ಗೃಹಗಳ ಜಾಗ ಹಾಗೂ ಅಕ್ಕಪಕ್ಕದಲ್ಲಿ ಲಭ್ಯವಾಗುವ ಸ್ಥಳದ ಬಳಕೆ ಕುರಿತು ಚರ್ಚಿಸಲಾಯಿತು.
ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸೈನ್ಸ್, ಆಡಳಿತ ವಿಭಾಗಗಳ ಪೈಕಿ ಯಾವುದನ್ನು ಇಲ್ಲಿಗೆ ಸ್ಥಳಾಂತರಿಸಬಹುದು. ಕಟ್ಟಡದಲ್ಲಿ ಸಣ್ಣಪುಟ್ಟ ಬದಲಾವಣೆ ಕುರಿತಂತೆ ಚರ್ಚಿಸಿದ ಸಚಿವರು, ಅಂತಿಮ ನಿರ್ಧಾರಕ್ಕಾಗಿ ಬೆಂಗಳೂರಲ್ಲಿ ಶೀಘ್ರ ಕಂದಾಯ, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಪ್ರಧಾನ ಕಾರ‌್ಯದರ್ಶಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ನಗರದ ಡಿಸಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಡಿಸಿ ಕಚೇರಿ ಹೊಸ ಕಟ್ಟಡವನ್ನು ಕುಂಚಿಗನಾಳ್‌ನಲ್ಲಿ ನಿರ್ಮಿಸಿರುವುದು ಅವೈಜ್ಞಾನಿಕವಾಗಿದೆ. ಸಾರ್ವಜನಿಕರಿಗೆ ಅನಾನುಕೂಲವಾಗಲಿದೆ. ಜಿಲ್ಲೆಯ ಶಾಸಕರು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಾಗ, ಈ ಕಟ್ಟಡಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರಿಸಲು ಸಮ್ಮತಿಸಿದ್ದಾರೆ ಎಂದರು.
ಚಿತ್ರದುರ್ಗ: ಸಾರ್ವಜನಿಕರ ಅನುಕೂಲ ಹಾಗೂ ನಗರದ ಅಭಿವೃದ್ಧಿ ದೃಷ್ಟಿಯಿಂದ ಚಿತ್ರದುರ್ಗದ ಪ್ರಮುಖ ರಸ್ತೆಗಳ ಅಗಲೀಕರಣ, ಡಿಸಿ ಆಫೀಸ್ ಕಟ್ಟಡವನ್ನು ಸರ್ಕಾರಿ ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸುವ ಕುರಿತಂತೆ ಅಗತ್ಯ ಕ್ರಮಗಳನ್ನು ಕಾಲಮಿತಿಯೊಳಗೆ ತೆಗೆದುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದರು.