ಡಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ

DCO
Published on

ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂವಿಧಾನ ದಿನದ ಅಂಗವಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಇದೇ ವೇಳೆ ಸಂವಿಧಾನ ಪೀಠಿಕೆ ಬೋಧಿಸಲಾಯಿತು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ಭೂದಾಖಲೆಗಳ ಉಪನಿರ್ದೇಶಕ ರಾಮಾಂಜನೇಯ, ಡಿಸಿ ಕಚೇರಿ ಸಹಾಯಕ ಸಿದ್ದೇಶ್, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net