ಡಿಸಿ ವಿರುದ್ಧ ಲೋಕಾಯುಕ್ತರಿಗೆ ದೂರು

Gurunath vadde
Published on

ಬೀದರ್: ಸಾರ್ವಜನಿಕರ ಭೇಟಿಗೆ ಸರ್ಕಾರದ ನಿರ್ದೇಶನ ಇದ್ದರೂ ಜನರಿಗೆ ಕಾಲಾವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ವಿರುದ್ಧ ಸಾಮಾಜಿಕ ಕಾರ್ಯಕರ್ತರ ಗುರುನಾಥ ವಡ್ಡೆ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಎಲ್ಲ ಅಧಿಕಾರಿಗಳು ನಿತ್ಯ ಮಧ್ಯಾಹ್ನ 3.30ರಿಂದ 5.30 ರವರೆಗೆ ಯಾವುದೇ ಸಭೆಗಳನ್ನು ನಿಗದಿಪಡಿಸದೆ ಸಾರ್ವಜನಿಕರು ಭೇಟಿಗೆ ಸಮಯ ನೀಡಿ ಅವರ ಕುಂದು ಕೊರತೆ ಆಲಿಸಿ, ಜನಸ್ಪಂದನಾ ತಂತ್ರಾಂಶದಲ್ಲಿ ದಾಖಲಿಸಿ, ನಿವಾರಿಸಲು ಕ್ರಮಕೈಗೊಳ್ಳುವಂತೆ ಸರ್ಕಾರದ ಸುತ್ತೋಲೆ ಇದೆ. ಆದರೆ ಡಿಸಿ ಶಿಲ್ಪಾ ಅವರು ಈ ರೀತಿ ಮಾಡುತ್ತಿಲ್ಲ. ಇದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ವಿರುದ್ಧವಾಗಿದೆ ಹಾಗೂ ಇದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net