ಡಿಸಿಎಂ ವಜಾಗೆ ಆಗ್ರಹಿಸಿ ಪ್ರತಿಭಟನೆ

1-KGL-5
Published on

ಕೊಳ್ಳೇಗಾಲ: ಸಂವಿಧಾನವನ್ನು ಬದಲಾಯಿಸುವುದಾಗಿ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಂಗಳವಾರ ಸಿದ್ದಯ್ಯನಪುರ ಗ್ರಾಮದ ಕೆ.ರಾಜು ಹಾಗೂ ಬೆಂಬಲಿಗರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾಕಾರರು ಡಾ.ವಿಷ್ಣು ವರ್ಧನ್ ರಸ್ತೆ, ಡಾ.ರಾಜ್‌ಕುಮಾರ್ ರಸ್ತೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯ ಮೂಲಕ ಸಾಗಿ ತಾಲೂಕು ಕಚೇರಿ ಮುಂದೆ ಸಮಾವೇಶಗೊಂಡರು. ಸಿದ್ದಯ್ಯನಪುರ ರಾಜು ಮಾತನಾಡಿ, ಸಂವಿಧಾನದ ಮೂಲಕ ಅನೇಕ ಸ್ಥಾನಮಾನ ಪಡೆದು ಇದೀಗ ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ಅವರು ಖಾಸಗಿ ವಾಹಿನಿಯೊಂದರಲ್ಲಿ ಸಂವಿಧಾನ ಬದಲಾಯಿಸುವುದಾಗಿ ನೀಡಿರುವ ಹೇಳಿಕೆ ಖಂಡನೀಯ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

ಬಳಿಕ ಶಿರಸ್ತೇದಾರ್ ಕೃಪಕರ್ ಅವರಿಗೆ ಮನವಿ ಸಲ್ಲಿಸಿದರು. ಮಧುವನಹಳ್ಳಿ ಸುರೇಶ್, ಬಾಪುನಗರ ಗವಿಸಿದ್ದ, ಶಂಕನಪುರ ಮಂಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net