ಡಿಸಿಎಂ ವಿರುದ್ಧ ಎಫ್‌ಐಆರ್‌ಗೆ ಒತ್ತಾಯ

CTD JDS----
Published on

ಚಿತ್ರದುರ್ಗ: ಸಂವಿಧಾನ ಬದಲಾಯಿಸುವುದಾಗಿ ಹೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಜೆಡಿಎಸ್ ಪರಿಶಿಷ್ಟ ಜಾತಿ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

ಹೊಸದಿಲ್ಲಿಯಲ್ಲಿ ಈಚೆಗೆ ಸಂದರ್ಶನವೊಂದರಲ್ಲಿ ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡಿ ಮತೀಯ ಆಧಾರಿತ ಮೀಸಲಾತಿ ಜಾರಿಗೆ ತರುತ್ತೇವೆ ಎಂದು ಉದ್ಧಟತನದ ಹೇಳಿಕೆ ಕೊಟ್ಟಿದ್ದಾರೆಂದು ಆರೋಪಿಸಿದ ಅವರು, ಮತೀಯ ಆಧಾರಿತ ಮೀಸಲು ಜಾರಿಗೆ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಎಚ್ಚರಿಸಿದರು.

ಸಂವಿಧಾನಕ್ಕೆ ಅಪಮಾನ ಮಾಡುವ ರೀತಿಯಲ್ಲಿ ಡಿಸಿಎಂ ಹೇಳಿದ್ದಾರೆ. ಇಂತಹ ಹೇಳಿಕೆಯನ್ನು ಪಕ್ಷ ಸಹಿಸದು. ಡಿಸಿಎಂ ಅವರ ಈ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಶಿವಕುಮಾರ್ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿದರು.

ಪಕ್ಷದ ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಪರಮೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಪಕ್ಷದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಸಣ್ಣತಿಮ್ಮಣ್ಣ, ಚಿದಾನಂದಸ್ವಾಮಿ, ಮಹಾಂತೇಶ್, ಕರಿಯಪ್ಪ, ರುದ್ರಪ್ಪ, ದುರುಗೇಶ್, ಮಾಲತೇಶ್, ಉಮಾಶಂಕರ್, ಹನುಮಂತರಾಯ್, ಬಸವರಾಜು, ನಾಗರಾಜು, ನರಸಿಂಹಪ್ಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net