

ಚಿಕ್ಕಮಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮತ್ತು ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ಖಂಡಿಸಿ ಬಿಜೆಪಿ ನಗರ, ಗ್ರಾಮಾಂತರ ಹಾಗೂ ಆಲ್ದೂರು ಮಂಡಳ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಮಂಗಳವಾರ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ಪ್ರತಿಭಟನೆ ಉz್ದೆÃಶಿಸಿ ಮುಖಂಡರು ಮಾತನಾಡುವ ವೇಳೆ ಕಾರ್ಯಕರ್ತರ ಮತ್ತೊಂದು ಗುಂಪು ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹಿಸಲು ಮುಂದಾದರು. ಕೂಡಲೇ ಪೊಲೀಸ್ ಅಧಿಕಾರಿಗಳು ಪೆಟ್ರೋಲ್ ಬಾಟಲ್ ಕಸಿದುಕೊಂಡರು. ಈ ನಡುವೆ ಕೆಲವು ಪೊಲೀಸ್ ಸಿಬ್ಬಂದಿಗಳ ಸಮವಸ್ತçಕ್ಕೂ ಪೆಟ್ರೋಲ್ ಸಿಡಿಯಿತು.
ಪ್ರತಿಕೃತಿ ದಹಿಸಲು ನಿರಾಕರಿಸಿದ ಪೊಲೀಸ್ ಅಧಿಕಾರಿಗಳೊಂದಿಗೆ ಬಿಜೆಪಿ ಕಾರ್ಯಕರ್ತರು ತೀವ್ರ ವಾಗ್ವಾದ ನಡೆಸಿದರು. ಕಾಂಗ್ರೆಸ್‌ಗೆ ಒಂದು ನ್ಯಾಯ, ಬಿಜೆಪಿ ಇನ್ನೊಂದು ನ್ಯಾಯವೇ ಎಂದು ಪ್ರಶ್ನಿಸಿದರು. ಪೊಲೀಸರು ಕಾಂಗ್ರೆಸ್ ಕೈಗೊಂಬೆಯAತೆ ಕರ್ತವ್ಯ ನಿರ್ವಹಿಸುವುದು ಬಿಡಬೇಕು. ಜನಸಾಮಾನ್ಯರ ಪರವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಇದಾದ ಬಳಿಕ ಕಾಲ್ನಡಿಗೆಯಲ್ಲಿ ಸಾಗಿದ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದ ಸಮೀಪದಲ್ಲಿ ಅಳವಡಿಸಿದ್ಧ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬ್ಯಾನರ್‌ಗಳಿಗೆ ಮೊಟ್ಟೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ಕೆಲನಿಮಿಷಗಳ ಕಾಲ ರಸ್ತೆ ತಡೆ ನಡೆಸಿ ಕೂಡಲೇ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪಟ್ಟುಹಿಡಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ, ಕಾಂಗ್ರೆಸ್ ಹುಟ್ಟು ಗುಣವೇ ಸಂವಿಧಾನ ತಿದ್ದುಪಡಿ ಮಾಡುವುದು. ದೇಶದ ಇತಿಹಾಸದ ಪುಟ ಗಮನಿಸಿದರೆ ಅನೇಕ ಬಾರಿ ಕಾಂಗ್ರೆಸ್ ಆಡಳಿತಕ್ಕೆ ಅನುಗುಣವಾಗಿ ಸಂವಿಧಾನ ತಿದ್ದುಪಡಿ ಮಾಡಿ ಬಿ.ಆರ್.ಅಂಬೇಡ್ಕರ್ ಆಶಯಗಳನ್ನು ಮಣ್ಣುಪಾಲು ಮಾಡಿದೆ. ಇದೀಗ ರಾಜಕೀಯ ದೊಂಬರಾಟ ಮಾಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್‌ನ ಗೋಮುಖ್ಯ ವಾಘ್ರನ ಮತ್ತೊಂದು ಮುಖವೇ ಡಿ.ಕೆ.ಶಿವಕುಮಾರ್. ದೇಶದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದರೆ ಸಂವಿಧಾನ ಬದಲಿಸಲಿವೆ ಎಂಬ ಸುಳ್ಳು ವದಂತಿಯನ್ನು ವಿಪಕ್ಷ ನಾಯಕ ರಾಹುಲ್‌ಗಾಂಧಿ ಸಂವಿಧಾನ ಕೈಪಿಡಿಯೊಂದಿಗೆ ಪ್ರಚಾರ ನಡೆಸಿದ್ದರು. ಆದರೀಗ ತಮ್ಮದೇ ಉಪಮುಖ್ಯಮಂತ್ರಿಗಳು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವುದು ಕಣ್ಣಿಗೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದರು.
ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕವಾಗಿ ಪ್ರತಿಭಟನೆ ನಡೆಸುವ ಹಕ್ಕು ದೇಶದ ಪ್ರತಿಯೊಬ್ಬರಿಗಿದೆ. ಆದರೆ ರಾಜ್ಯಸರ್ಕಾರ ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿ, ಶಾಸಕರ ನಡುವೆ ಹೊಂದಾಣಿಕೆ ಕೊರತೆಯಿದೆ. ಸದ್ಯದಲ್ಲೇ ಐದು ವರ್ಷಗಳು ಪೂರೈಸದೇ ಸರ್ಕಾರ ಪಥನಗೊಳ್ಳಲಿದೆ ಎಂದು ಭವಿಷ್ಯ ನುಡಿದರು.
ಬಿಜೆಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್ ಮಾತನಾಡಿ, ಸಂವಿಧಾನಾತ್ಮಕವಾಗಿ ಅಧಿಕಾರ ಪಡೆದು ಸಂವಿಧಾನಕ್ಕೆ ದ್ರೋಹವೆಸಗುವ ಉಪಮುಖ್ಯಮಂತ್ರಿಗಳು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು. ರಾಜ್ಯ ಹಾಗೂ ದೇಶದ ಬಹುಸಂಖ್ಯಾತರಿಗೆ ಈ ಹೇಳಿಕೆಯಿಂದ ನೋವುಂಟಾಗಿದೆ. ಹೀಗಾಗಿ ಕೂಡಲೇ ಡಿ.ಕೆ.ಶಿವಕುಮಾರ್ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಂಬೇಡ್ಕರ್‌ಗೆ ಅಪಮಾನ ಮಾಡುವ ಜೊತೆಗೆ ದಲಿತರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ. ಇದೀಗ ಮುಸ್ಲಿಂ ಸಮಾಜ ಒಲೈಸಲು ಸಂವಿಧಾನವನ್ನೇ ಬದಲಿಸುತ್ತೇವೆ ಎಂಬ ಹೇಳಿಕೆ ನೀಡಿ ಉಪಮುಖ್ಯಮಂತ್ರಿ ಅಂಬೇಡ್ಕರ್‌ಗೆ ಅಗೌರವ ತೋರಿದ್ದಾರೆ. ಹೀಗಾಗಿ ಕೂಡಲೇ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದರು.
ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕುರುವಂಗಿ ವೆಂಕಟೇಶ್ ಮಾತನಾಡಿ, ದಲಿತರು, ಶೋಷಿತರು ಹಾಗೂ ಬಡವರ ಪರವೆಂದು ರಾಜ್ಯದ ಅಧಿಕಾರ ಹಿಡಿದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ ಕೋಟ್ಯಂತರ ರೂ. ಹಣವನ್ನು ಮೀಸಲಿಡದೇ ಗ್ಯಾರಂಟಿಗೆ ಬಳಸಿ ಅಪಮಾನಿಸಿದೆ. ಪಂಚಾಯಿತಿಯಿAದ ಪಾರ್ಲಿಮೆಂಟ್‌ವರೆಗೆ ಅತಿಹೆಚ್ಚು ದ್ರೋಹವೆಸಗಿರುವ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ವಿಜಯ್‌ಕುಮಾರ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಮುಖಂಡರಾದ ಕೋಟೆ ರಂಗನಾಥ್, ಜಸಂತ್ ಅನಿಲ್‌ಕುಮಾರ್, ವೀಣಾ ರತ್ನಾಕರ್, ರವೀಂದ್ರ ಬೆಳವಾಡಿ, ಜಯವರ್ಧನ್, ಸಂತೋಷ್ ಕೋಟ್ಯಾನ್, ಈಶ್ವರಹಳ್ಳಿ ಮಹೇಶ್, ದಿನೇಶ್, ಎಚ್.ಕೆ. ಕೇಶವಮೂರ್ತಿ, ಬಿ.ರಾಜಪ್ಪ, ಸೋಮಶೇಖರ್, ಬೆನಡಿಕ್ಟ್ ಜೇಮ್ಸ್, ಪ್ರದೀಪ್ ಮತ್ತಿತರರಿದ್ದರು.