

ಮೈಸೂರು: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 23ರಿಂದ ಮೂರು ದಿನ ತೋಟಗಾರಿಕೆ ಮೇಳ ಹಮ್ಮಿಕೊಳ್ಳಲಾಗಿದೆ.
ವಿವಿ ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಬ್ಬ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆಯನ್ನು ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ಆಸಕ್ತರು ಅರ್ಜಿ ನಮೂನೆಯನ್ನು ವಿವಿ ವೆಬ್‌ಸೈಟ್: -್ಝಠಿ;ಡಿಡಿಡಿ.್ಠಚಿಜಚ್ಝಟಠಿ.ಚ್ಟ್ಞಠಿ.ಜಟ.ಜ್ಞಿ ಮೂಲಕ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 10ರ ಒಳಗಾಗಿ ಡೀನ್, ತೋಟಗಾರಿಕೆ ಮಹಾವಿದ್ಯಾಲಯ, ಯಲಚಹಳ್ಳಿ, ಇಲವಾಲ, ಮೈಸೂರು-571130 ಇವರಿಗೆ ಸಲ್ಲಿಸಬೇಕು. ಮಾಹಿತಿಗಾಗಿ ದೂ. 0821-2970411, 8147959226 ಸಂಪರ್ಕಿಸಬಹುದು.