ಡಿಸೇಲ್, ಪೆಟ್ರೋಲ್ ಮೇಲ್ ಸೆಸ್ ವಿಧಿಸಲು ಒತ್ತಾಯ

23 ckm 2
ಚಿಕ್ಕಮಗಳೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆಯಿಂದ ಆಯೋಜಿಸಲಾಗಿದ್ದ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಉದ್ಘಾಟಿಸಿದರು. ಸಿ.ಟಿ.ರವಿ, ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಡಾ.ಕೆ.ಪಿ.ಅಂಶುಮAತ್, ಬಿ.ಎಚ್.ಹರೀಶ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಕಾರ್ಮಿಕರ ಉದ್ದಾರದ ಉz್ದೆÃಶದಿಂದ ಪೆಟ್ರೋಲ್ ಹಾಗೂ ಡಿಸೆಲ್ ಮೇಲೆ ೫೦ ಪೈಸೆ ಅಥವಾ ಒಂದು ರೂ. ಕಾರ್ಮಿಕ ಸೆಸ್ ವಿಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಗಿದೆ. ಹೀಗೆ ಸೆಸ್ ವಿಧಿಸುವುದರಿಂದ ಕಾರ್ಮಿಕರ ಕಲ್ಯಾಣ ನಿಧಿಗೆ ಸಾವಿರಾರು ಕೋಟಿ ರೂ. ಬರುತ್ತದೆ. ಆಗ ಕಾರ್ಮಿಕ ವರ್ಗಕ್ಕೆ ಹೆಚ್ಚಿನ ಅನುಕೂಲ ಒದಗಿಸಲು ಸಾಧ್ಯವಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆಯಿಂದ ಆಯೋಜಿಸಲಾಗಿದ್ದ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕಾರ್ಮಿಕರ ಸೆಕ್ಸ್ ವಿದಿಸುವಂತೆ ಕಾರ್ಮಿಕ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಬೇಕು ಎಂದು ಮನವಿ ಮಾಡಿದರು.

ಕಾರ್ಮಿಕ ಇಲಾಖೆಯಿಂದ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಆನ್ಲೈನ್ ಮೂಲಕ ಉತ್ಪನ್ನಗಳನ್ನು ಮನೆ ಮನೆಗೆ ಸರಬರಾಜು ಮಾಡುವವರಿಗಾಗಿ ಗಿಗ್ ಕಾರ್ಮಿಕ ಯೋಜನೆ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ೬ ಲಕ್ಷಕ್ಕೂ ಅಧಿಕ ಗಿಗ್ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ. ಜೊತೆಗೆ ಸಿನಿ ಬಿಲ್ ಸಹ ಜಾರಿ ಮಾಡಲಾಗುತ್ತಿದೆ. ಈ ಮೂಲಕ ಚಲನಚಿತ್ರಗಳ ಟಿಕೆಟ್ ಮೇಲೆ ಒಂದು ಅಥವಾ ಎರಡು ಪರ್ಸೆಂಟ್ ಕಾರ್ಮಿಕ ಸೆಸ್ ವಿಧಿಸಿ ಇಲ್ಲಿ ಸಂಗ್ರಹವಾಗುವ ಹಣವನ್ನು ಸಿನಿಮಾ ರಂಗದ ಕಾರ್ಮಿಕರು, ನಾಟಕ ಕಂಪನಿಗಳ ಕಲಾವಿದರು ಹಾಗೂ ಇತರೆ ಕಲಾವಿದರ ಕಲ್ಯಾಣಕ್ಕೆ ಬಳಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಆಶಾದೀಪ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಈ ಕಾರ್ಯಕ್ರಮದಡಿ ಎಸ್ಸಿ ಎಸ್ಟಿ ಸಮುದಾಯದ ಕಾರ್ಮಿಕರಿಗೆ ಯಾವ ಉದ್ಯಮಿದಾರರು ಕೆಲಸ ನೀಡಿದಲ್ಲಿ ಆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಎರಡು ವರ್ಷದ ಅವಧಿ ವರೆಗೆ ಶೇ. ೫೦ರಷ್ಟು ವೇತನ ಪಾವತಿ ಮಾಡಲಾಗುತ್ತದೆ. ಇದರಿಂದ ಸಣ್ಣ ಉದ್ದಿಮೆದಾರರಿಗೂ ಅನುಕೂಲವಾಗುತ್ತದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಭಾರತ ಕಾಯಕ ಸಂಸ್ಕೃತಿ ಆಧರಿಸಿದ ದೇಶ. ಹಿಂದೆ ಇಡೀ ವಿಶ್ವಕ್ಕೆ ಭಾರತ ಸರಕು ಸರಂಜಾಮು ಸರಬರಾಜು ಮಾಡುತ್ತಿತ್ತು. ಆದರೆ ಕಾಲಕ್ಕೆ ತಕ್ಕಂತೆ ತಾಂತ್ರಿಕತೆ ಅಳವಡಿಸಿಕೊಳ್ಳದ ಕಾರಣ ಇಂದು ನಾವು ಉತ್ಪಾದನೆಯಲ್ಲಿ ಹಿಂದೆ ಬಿದ್ದಿz್ದÉÃವೆ. ಹೀಗಾಗಿ ಮತ್ತೆ ಭಾರತವನ್ನು ನಾವು ಕಾಯಕ ಪ್ರಧಾನ ರಾಷ್ಟö್ರವನ್ನಾಗಿ ಮಾಡಬೇಕು. ಜೊತೆಗೆ ಪ್ರತಿವೃತ್ತಿಪರರಿಗೂ ಗೌರವ ನೀಡುವಂತಾಗಬೇಕು. ಆಗ ಕಾಯಕ ಸಂಸ್ಕೃತಿಗೆ ಬೆಲೆ ಬರುತ್ತದೆ ಎಂದರು.

ನಾವು ಪಡೆಯುವ ಪದವಿ ಪ್ರಮಾಣ ಪತ್ರಗಳು ಉದ್ಯೋಗ ನೀಡುತ್ತವೆ ಎಂದು ಹೇಳಲಾಗುವುದಿಲ್ಲ. ಆದರೆ ನಾವು ಒಂದು ಕಸುಬನ್ನು ಕಲಿತಾಗ ಎಲ್ಲಿಯಾದರೂ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಸಮಾಜದ ಕಟ್ಟ ಕಡೆಯ ಬಡವ ಸ್ವಾವಲಂಬಿಯಾಗಿ ಸ್ವಾಭಿಮಾನಿ ಆಗುತ್ತಾನೋ ಆಗ ದೇಶ ವಿಶ್ವಗುರುವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ೭೮,೧೩೨ ಜನ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ೩೧,೪೭೨ ಜನ ಕಾರ್ಮಿಕರಿಗೆ ವಿವಿಧ ಯೋಜನೆ ಅಡಿ ೫೬.೯೮ ಕೋಟಿ ರೂ. ಹಣವನ್ನು ಅವರ ಖಾತೆಗೆ ಜಮೆ ಮಾಡಲಾಗಿದೆ. ೨೩,೨೪೨ ಜನ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ಯೋಜನೆಯಡಿ ೧೯.೯೫ ಕೋಟಿ ರೂ. ಅನುದಾನ ನೀಡಲಾಗಿದೆ. ೩೮೧ ಕಾರ್ಮಿಕರ ವೈದ್ಯಕೀಯ ವೆಚ್ಚಕ್ಕಾಗಿ ೧.೪೯ ಕೋಟಿ ರೂ. ವ್ಯಯಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬೇರೆ ಬೇರೆ ರೀತಿಯ ಪ್ರಚೋದನೆಯಿಂದ ಹೊಟ್ಟೆ ತುಂಬುವುದಿಲ್ಲ. ಮಕ್ಕಳಿಗೆ ಒಳ್ಳೆಯ ಶಿಕ್ಷಣವು ಸಿಗುವುದಿಲ್ಲ. ಜೊತೆಗೆ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡಜನರ ಬದುಕು ಕಟ್ಟಿಕೊಡಲು ಶ್ರಮಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್, ಭದ್ರಕಾಡ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್, ಕೃಷಿ ಉತ್ಪನ್ನ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್, ಸಿಡಿಎ ಅಧ್ಯಕ್ಷ ನಯಾಜ್ ಅಹಮದ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net