ಡೀಸೆಲ್ ದರ , ಹೆದ್ದಾರಿ ಸುಂಕ ಏರಿಕೆಗೆ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ  ಖಂಡನೆ

Published on

ಮೈಸೂರು: ರಾಜ್ಯ ಸರ್ಕಾರ ಡೀಸೆಲ್ ದರ ಏರಿಕೆ ಮಾಡಿರುವುದನ್ನು ಹಾಗೂ ಕೇಂದ್ರ ಸರ್ಕಾರ ಹೆದ್ದಾರಿ ಸುಂಕ ಹೆಚ್ಚಳ ಮಾಡಿರುವುದನ್ನು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಖಂಡಿಸಿದೆ.

ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಏರಿಕೆ ಮಾಡಿರುವುದರಿಂದ ಲೀಟರಿಗೆ 2 ರೂ.ಹೆಚ್ಚಳವಾಗಿದೆ. ಹಾಗೆಯೇ ರಾಷ್ಟ್ರೀಯ ಹೆದ್ದಾರಿ ಸುಂಕವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶೇ.5ರಷ್ಟು ಏರಿಕೆ ಮಾಡಿದೆ.

ಡೀಸೆಲ್ ಮತ್ತು ಹೆದ್ದಾರಿಗಳೆರಡೂ ಸಾರ್ವಜನಿಕ ಸಾರಿಗೆ ಮತ್ತು ಸರಕು ಸಾಗಣೆ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಪ್ರಯಾಣ ದರಗಳು, ಸಾಗಣೆ ವೆಚ್ಚ ಏರಿಕೆಯಾಗಿ ಅಗತ್ಯ ವಸ್ತುಗಳ ಬೆಲೆ ಇನ್ನಷ್ಟು ತುಟ್ಟಿಯಾಗಲಿದೆ ಎಂದು ಜಿಲ್ಲಾಧ್ಯಕ್ಷೆ ಪಿ.ಎಸ್.ಸಂಧ್ಯಾ ಹೇಳಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಲೆ ಏರಿಕೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಬೊಟ್ಟು ಮಾಡಿ ದೂಷಿಸುತ್ತ ಜನರ ಮೇಲೆ ಮಂಕುಬೂದಿ ಎರಚುತ್ತಿವೆ. ಎರಡೂ ಪಕ್ಷಗಳು ಅಪ್ಪಟ ಜನವಿರೋಧಿ ನೀತಿ ಅನುಸರಿಸುತ್ತಿವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಇಂತಹ ನಡೆಗಳ ವಿರುದ್ಧ ಜನರು ಪ್ರಬಲ ಹೋರಾಟಕ್ಕೆ ಮುಂದಾಗಬೇಕು ಎಂದು ಹೇಳಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net