

ಸುಂಟಿಕೊಪ್ಪ: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡೆಂಘಿ ಜ್ವರ ಪತ್ತೆಯಾದ ಹಿನ್ನೆಲೆ ಆರೋಗ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಮನೆ ಮನೆಗೆ ತೆರಳಿ ಮುನ್ನ್ನೆಚ್ಚರಿಕೆ ಕ್ರಮ ಕೈಗೊಂಡು, ಸ್ವಚ್ಛತೆ ಕಾಪಾಡುವಂತೆ ಅರಿವು ಮೂಡಿಸಿದರು.
ಈಗಾಗಲೇ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಗ್ರಾಮ ಪಂಚಾಯಿತಿಗೆ ಪತ್ರ ಬರೆದು ಸುಂಟಿಕೊಪ್ಪದಲ್ಲಿ ಡೆಂಘಿ ಪ್ರಕರಣ ಪತ್ತೆಯಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರು ಪಟ್ಟಣದ ಪ್ರತಿ ವಾರ್ಡ್‌ಗಳ ಮನೆ ಮನೆಗಳಿಗೆ ತೆರಳಿ ಸಮೀಕ್ಷೆ ನಡೆಸಿ, ಜನರಲ್ಲಿ ಡೆಂಗೆ ಜ್ವರ, ಚಿಕೂನ್ ಗುನ್ಯಾ, ಮಲೇರಿಯಾ, ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು.