ಡೆಂೆ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಿ

26 YERRISWAMY 04
Published on

ಬಳ್ಳಾರಿ : ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಡೆಂೆ ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಡಿಯೋ ಸಂವಾದದಲ್ಲಿ ಡಿಸಿ, ಜಿಪಂ ಸಿಇಒ ಅವರಿಗೆ ಸೂಚಿಸಿದರು.
ಬೆಂಗಳೂರಿನ ಆರೋಗ್ಯ ಸಚಿವರ ಕಚೇರಿಯಲ್ಲಿ ಗುರುವಾರ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದರು. ಡೆಂೆ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂೆ ಪ್ರಕರಣ ಕಂಡುಬಂದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು ಮತ್ತು ಆ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದರು.
ವಿಡಿಯೋ ಸಂವಾದ ಬಳಿಕ ಡಿಸಿ ಪ್ರಶಾಂತ ಕುಮಾರ ಮಿಶ್ರಾ ಮಾತನಾಡಿ, ಜಿಲ್ಲೆಯಲ್ಲಿ ಡೆಂೆ ನಿಯಂತ್ರಣದಲ್ಲಿದ್ದು, ಇನ್ನು ಹೆಚ್ಚು ಹೆಚ್ಚು ಮಾದರಿ ಪರೀಕ್ಷೆ ನಡೆಸಬೇಕು. ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಇರಿಸಿಕೊಳ್ಳಬೇಕು. ಕುಡಿಯುವ ನೀರು ಕಲುಷಿತಗೊಳ್ಳದಂತೆ ನಿಗಾವಹಿಸಬೇಕು ಎಂದು ಡಿಎಚ್‌ಒ ಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net