ಡೆಂೆ ನಿಯಂತ್ರಣಕ್ಕೆ ಶುಚಿತ್ವ ಕಾಪಾಡಿ

29 YERRISWAMY 01
Published on

ಬಳ್ಳಾರಿ, ಡೆಂೆ ರೋಗ ನಿಯಂತ್ರಣಕ್ಕಾಗಿ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.
ಇಲ್ಲಿನ ಅನಂತಪುರ ರಸ್ತೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲ ಪ್ರದೇಶಗಳಲ್ಲಿ ಪ್ರತಿ ಶುಕ್ರವಾರ ಆಯೋಜಿಸುವ ಈಡಿಸ್ ಸೊಳ್ಳೆಯ ಲಾರ್ವಾ ನಿರ್ಮೂಲನಾ ದಿನದ ಅಂಗವಾಗಿ ಸಮೀಕ್ಷಾ ಸಮಯದಲ್ಲಿ ಭಾಗಿಯಾಗಿ ಪರಿಶೀಲನೆ ಕೈಗೊಂಡು ಮಾತನಾಡಿದರು. ಈಗಾಗಲೇ ಜಿಲ್ಲಾಡಳಿತ ನೀಡಿರುವ ಅಗತ್ಯ ಸಲಹೆ ಸೂಚನೆಗಳ ಅನ್ವಯ ವೈದ್ಯಕಿಯ ತಂಡಗಳು ನರ್ಸಿಂಗ್ ವಿದ್ಯಾರ್ಥಿಗಳ ಮೂಲಕ ತಂಡ ರಚಿಸಿ ಪ್ರತಿ ತಂಡಕ್ಕೆ 100 ಮನೆಯಂತೆ ಸಮೀಕ್ಷೆ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ನೀಡುವ ಕಾರ್ಯ ನಡೆಯುತ್ತಿದೆ ಎಂದರು. ಕೇವಲ ಮನೆಗಳಲ್ಲಿ ಮಾತ್ರವಲ್ಲದೇ ಶಾಲೆ, ಅಂಗನವಾಡಿಗಳು, ವಾಣಿಜ್ಯ ಮಳಿಗೆಗಳಲ್ಲಿ ನೀರು ಸಂಗ್ರಹಾರಕಗಳನ್ನು ಪರಿಶೀಲಿಸಿ, ಲಾರ್ವಾ ಕಂಡುಬಂದಲ್ಲಿ ಟೆಮೋಫಾಸ್ ದ್ರಾವಣವನ್ನು ಬಳಕೆಗಾಗಿ ನೀರು ತುಂಬುವ ಪರಿಕರಗಳಿಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಹಾಕಲು ಸೂಚಿಸಿಲಾಗಿದೆ ಎಂದರು. ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ದಾಸ್ತಾನು ಲಭ್ಯವಿದ್ದು, ಕುಟುಂಬದ ಸದಸ್ಯರಲ್ಲಿ ಯಾರಿಗಾದರೂ ಜ್ವರ ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net