ಡೆಂೇ ಜ್ವರ ನಿಯಂತ್ರಣಕ್ಕೆ ಮುಂಜಾಗ್ರತೆ ಅಗತ್ಯ

ctd --bvg
Published on

ಚಿತ್ರದುರ್ಗ: ಮಳೆಗಾಲದಲ್ಲಿ ಮನೆಯ ಒಳಗಡೆ ಮತ್ತು ಹೊರಗಡೆ ಘನ ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗಿ ಅದರಲ್ಲಿರುವ ಸೊಳ್ಳೆಗಳಿಂದ ಡೆಂೆ ಜ್ವರ ಮತ್ತು ಚಿಕನ್ ಗುನ್ಯಾಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂದು ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್ ಹೇಳಿದರು.

ಡೆಂೇ ಜ್ವರ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಚಿತ್ರದುರ್ಗ ತಾಲೂಕಿನ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್‌ಗಳಿಗೆ ಬುದ್ಧನಗರ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

ಡೆಂೇ ಜ್ವರಕ್ಕೆ ನಿಗದಿತ ಚಿಕಿತ್ಸೆ ಇಲ್ಲ. ಆದ್ದರಿಂದ ಮುಂಜಾಗ್ರತೆ ಬಹುಮುಖ್ಯ. ನೀರಿನ ತಾಣಗಳ ಸ್ವಚ್ಛತೆಯೊಂದಿಗೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ರೋಗ ಬಾರದಂತೆ ನಿಗಾವಹಿಸಬೇಕು ಎಂದರು.

ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿಕಡಿ ಮಾಹಿತಿ ನೀಡಿ, ರೋಗ ನಿಯಂತ್ರಣದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಹಾಸ್ಟೆಲ್ ವಾ ರ್ಡನ್‌ಗಳ ಪಾತ್ರ ತುಂಬಾ ಮಹತ್ವದ್ದಾಗಿದೆ ಎಂದರು.

ಆರೋಗ್ಯ ಇಲಾಖೆ ಅಧಿಕಾರಿಗಳು ಲಾರ್ವಾ ಸರ್ವೆ ಕೈಗೊಂಡು ಸಾರ್ವಜನಿಕರಿಗೆ ಸೊಳ್ಳೆಯಿಂದ ಹರಡುವ ರೋಗಗಳ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ ಎಂದು ತಿಳಿಸಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್, ವೈದ್ಯಾಧಿಕಾರಿ ಡಾ. ಸುರೇಂದ್ರ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪ್ರವೀಣ್‌ಕುಮಾರ್, ಪಾರ್ವತಿ, ಕೇಶವ, ಮಾನ್ಯ, ಸಿಬ್ಬಂದಿ ಅಕ್ಷಯ್, ನಿಂಗೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net