

ಚಿತ್ರದುರ್ಗ: ಮುಂಗಾರು ಆರಂಭದ ಈ ಸಂದರ್ಭದಲ್ಲಿ ಎದುರಾಗುವ ಡೆಂೇ ಹಾವಳಿ ನಿಯಂತ್ರಕ್ಕೆ ಎಲ್ಲರ ಸಹಕಾರ, ಮುಂಜಾಗ್ರತೆ ಅಗತ್ಯ ಎಂದು ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್ ಹೇಳಿದರು.
ಜಿಲ್ಲಾಡಳಿತ, ಜಿಪಂ,ಆರೋಗ್ಯ ಇಲಾಖೆಯ ಜಿಲ್ಲಾ ಕೀಟ ಜನ್ಯ ರೋಗಗಳ ನಿಯಂತ್ರಣ ವಿಭಾಗ ಹಾಗೂ ಜಿಲ್ಲಾಸ್ಪತ್ರೆ ಸರ್ಕಾರಿ ನರ್ಸಿಂಗ್ ಕಾಲೇ ಜು ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಡೆಂೇ ದಿನದ ಅಂಗವಾಗಿ ಏರ್ಪಡಿಸಿದ್ದ ಜಾಗೃತಿ ಜಾಥಾ ಉದ್ಘಾ ಟಿಸಿ ಮಾತನಾಡಿದರು.
ಕಳೆದ ವರ್ಷ 929 ಡೆಂೇ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದ್ದವು. ಪ್ರಸಕ್ತ ಮೇ 15ರವರೆಗೆ 43 ಪ್ರಕರಣಗಳು ಕಂಡು ಬಂ ದಿವೆ. ಡೆಂೇ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದ್ದರೂ,ನಿರ್ಲಕ್ಷಿಸುವಂತಿಲ್ಲ. ಮುಂಜಾಗ್ರತಾ ಕ್ರಮಗಳು ಜಾರಿಯಲ್ಲಿರಲಿ ಎಂದರು.
ಜಿಲ್ಲಾ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎನ್.ಕಾಶಿ ಮಾತನಾಡಿ, ನಗರ ಪ್ರದೇಶಗಳಲ್ಲಿ ಡೆಂೇ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು,ಪ್ರತಿ ಶುಕ್ರವಾರ ಮತ್ತು ಮಂಗಳವಾರಗಳಂದು ನಗರದಲ್ಲಿ ಲಾರ್ವಾ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದರು. ಜಿಲ್ಲಾಸ್ಪತ್ರೆಯಿಂದ ಜೋಗಿ ಮಟ್ಟಿ ರಸ್ತೆಯಲ್ಲಿ ಸಾಗಿದ ಜಾಥಾ, ಕರುವಿನಕಟ್ಟೆ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಬಳಿಕ ರಂಗಯ್ಯನ ಬಾಗಿಲು ಮೂಲಕ ಜಾಥಾ ಜಿಲ್ಲಾಸ್ಪತ್ರೆ ತಲುಪಿತು. ನರ್ಸಿಂಗ್ ವಿದ್ಯಾರ್ಥಿಗಳು ಡೆಂೇ ನಿಯಂತ್ರಣಕ್ಕೆ ಸಂಬಂಧಿಸಿದ ಘೋಷಣೆಗಳನ್ನು ಕೂಗಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ, ನಿವಾಸಿ ವೈದ್ಯಾಧಿಕಾರಿ ಡಾ. ಆನಂದ ಪ್ರಕಾಶ್, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಸಿ.ಒ. ಸುಧಾ, ಡಾ.ರೇಖಾ, ಡಿಡಿಪಿಐ ಎಂ.ಆರ್. ಮಂಜುನಾಥ, ಟಿಎಚ್‌ಒ ಡಾ.ಬಿ.ವಿ. ಗಿರೀಶ್, ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ. ಕೃಷ್ಣಮೂರ್ತಿ, ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಆರೋಗ್ಯ ಶಿಕ್ಷಣಾಧಿಕಾರಿ ಶಿವರಾಜ್, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಸುರೇಶ್‌ಬಾಬು, ಮಲೇರಿಯಾ ವಿಭಾಗದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪಾಂಡು, ಮಲ್ಲಿಕಾರ್ಜುನ್, ನಾಗರಾಜ್, ಮಳಲಿ ಶ್ರೀನಿವಾಸ್, ತುರುವನೂರು ಶ್ರೀನಿವಾಸ್, ಗುರುಮೂರ್ತಿ,ನಂದೀಶ್, ಗಂಗಾಧರ್, ರುದ್ರಮುನಿ ಮತ್ತಿತರರು ಇದ್ದರು.