ಡೆತ್ ನೋಟ್ ಇಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

bkt-9-11 b
ಸಹಪಾಠಿಗಳ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ವಿದ್ಯಾರ್ಥಿನಿ ಸಂಬAಽಕರು ಹಾಗೂ ಎಬಿವಿಪಿ ಕಾರ್ಯಕರ್ತರು ಕಾಲೇಜಿಗೆ ತೆರಳಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವನ್ನು ಖಂಡಿಸಿ, ತರಾಟೆಗೆ ತೆಗೆದುಕೊಂಡರು.
Published on

ಬಾಗಲಕೋಟೆ: ಕಾಲೇಜಿನಲ್ಲಿ ಸಹಪಾಠಿಗಳ ನಿರಂತರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಒಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಭಂಡಾರಿ ಖಾಸಗಿ ಕಾಲೇಜಿನಲ್ಲಿ ಬಿಎ ೪ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ ಅಂಜಲಿ ಮುಂಡಾಸ್ (೨೧) ಆತ್ಮಹತ್ಯೆ ಮಾಡಿಕೊಂಡಿರುವ ನತದೃಷ್ಟೆ ವಿದ್ಯಾರ್ಥಿನಿ.

ಕಾಲೇಜಿನಲ್ಲಿ ಈಕೆಯ ಸಹಪಾಠಿಗಳಾದ ವರ್ಷಾ ಕೆ.ಜಮ್ಮನಕಟ್ಟಿ, ಪ್ರದೀಪ ಅಳಗುಂದಿ ಮತ್ತು ಇನ್ನಿತರರು ಸೇರಿ ತನ್ನನ್ನು ಮಾನಸಿಕವಾಗಿ ಕುಗ್ಗುವಂತೆ ಮಾಡಿದ್ದಾರೆ. ಅವರು ತನ್ನ ಬದುಕಿನ ಮಾರಕ ವ್ಯಕ್ತಿಗಳಾಗಿದ್ದು, ಇವರನ್ನು ಸುಮ್ಮನೆ ಬಿಡಬಾರದು. ಎಲ್ಲರಿಗೂ ಗುಡ್ ಬೈ ಹೇಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಶುಕ್ರವಾರ ಮಧ್ಯಾಹ್ನ ಕಾಲೇಜಿನಿಂದ ಮನೆಗೆ ಬಂದು ಸೀರೆಯಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಇಬ್ಬರ ಹೆಸರಿನ ಜೊತೆಗೆ ಅವರ ಮೊಬೈಲ್ ನಂಬರ್ ಸಹ ನಮೂದಿಸಿದ್ದಾರೆ.

ಈ ಬಗ್ಗೆ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶನಿವಾರ ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆ ಬಳಿಕ ಅಂತಿಮ ಸಂಸ್ಕಾರ ನಡೆಸಲಾಯಿತು. ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು. ಬೆಳೆದು ನಿಂತಿದ್ದ ಮಗಳಿಗೆ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿರುವ ಆರೋಪಿಗಳನ್ನು ಸುಮ್ಮನೆ ಬಿಡಬಾರದು ಎಂದು ಕಣ್ಣೀರು ಹಾಕುತ್ತಲೇ ವಿದ್ಯಾರ್ಥಿನಿಯ ಕುಟುಂಬಸ್ಥರು ಆಗ್ರಹಿಸಿದರು. ಜೊತೆಗೆ ಕಾಲೇಜು ಆಡಳಿತ ಮಂಡಳಿ ವಿರುದ್ಧವೂ ಅವರ ಆಕ್ರೋಶದ ಕಟ್ಟೆ ಒಡೆದಿತ್ತು.

===============

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net