

ಚಿತ್ತಾಪುರ: ಡೋಣಗಾಂವ್ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಕಿಡಿಗೇಡಿಗಳು ಸೆಗಣಿ ಹಚ್ಚಿ ವಿಕೃತಿ ಮೆರೆದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸೆ.6ರಂದು ಗ್ರಾಪಂಗೆ ಚುನಾವಣೆ ನಡೆದಿದ್ದು, ನಾಗರತ್ನ ಮಲ್ಲಿಕಾರ್ಜುನ ಅಧ್ಯಕ್ಷೆ ಹಾಗೂ ಶಾಂತಮ್ಮ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು. ನಂತರ ಪಂಚಾಯಿತಿ ಕಟ್ಟಡಕ್ಕೆ ಸುಣ್ಣ- ಬಣ್ಣ ಮಾಡಿಸಿ ಕಟ್ಟಡದ ಸೌಂದರ್ಯ ಹೆಚ್ಚಿಸಲಾಗಿತ್ತು. ಇದನ್ನು ಸಹಿಸದ ಕಿಡಿಗೇಡಿಗಳು ಗ್ರಾಪಂ ಕಟ್ಟಡ, ಬಾಗಿಲು ಹಾಗೂ ನಾಮಫಲಕಕ್ಕೆ ಸೆಗಣಿ ಹಚ್ಚಿದ್ದಾರೆ. ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಜರುಗಿಸಬೇಕು ಎಂದು ಗ್ರಾಪಂ ಪಿಡಿಒ ಹಾಗೂ ಗ್ರಾಮಸ್ಥರು ಚಿತ್ತಾಪುರ ಠಾಣೆಗೆ ದೂರು ಸಲ್ಲಿಸಿದ್ದಾರೆ.