ಡ್ರಗ್ಸ್ ಮಾಫಿಯಾ ಮಟ್ಟ ಹಾಕಿ

Oplus_16908288
Oplus_16908288
Published on

ಬಾಗಲಕೋಟೆ: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸರು ನಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ.ತಿಮ್ಮಾಪುರ ಹೇಳಿದರು.

ಮುಧೋಳ ನಗರದಲ್ಲಿ ಮಂಗಳವಾರ ಪೊಲೀಸ್ ಇಲಾಖೆಗೆ ನೂತನವಾಗಿ ನಾಲ್ಕು ವಾಹನಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯ ಪಾತ್ರವು ಕೇವಲ ಕಾನೂನು ಪಾಲನೆಗೆ ಸೀಮಿತವಾಗಿಲ್ಲ, ಅದು ಸಮಾಜದ ರಕ್ಷಣೆಯ ಸಂಕೇತವಾಗಿದೆ. ಎಲ್ಲಾ ಧರ್ಮದವರ ಮೇಲೆ ಪ್ರೀತಿ ಇರಲಿ. ಆದರೆ ನಿಮ್ಮ ರಕ್ಷಣಾ ಕಾರ್ಯದ ಮೇಲೆ ಜನರಿಗೆ ಭಯ ಮಿಶ್ರಿತ ಪ್ರೀತಿ ಇರಬೇಕು ಎಂದು ಅಭಿಪ್ರಾಯಪಟ್ಟರು.

ರಕ್ಷಣೆ ಮಾಡುವ ಜವಾಬ್ದಾರಿಯಲ್ಲಿ ಲೋಪ ಕಂಡುಬAದರೆ ಅಥವಾ ಕಾನೂನುಬಾಹಿರ ಚಟುವಟಿಕೆಗಳಿಗೆ ಬೆಂಬಲ ನೀಡಿದರೆ, ಅಂತಹವರ ಮೇಲೆ ಯಾವುದೇ ಒತ್ತಡಕ್ಕೆ ಮಣಿಯದೆ ನಿರ್ದಾಕ್ಷಿಣ್ಯವಾಗಿ ಕಾನೂನಾತ್ಮಕ ಕ್ರಮ ಜರುಗಿಸಬೇಕು ಎಂದು ಹಿರಿಯ ಅಽಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಡ್ರಗ್ಸ್ ಮತ್ತು ಕಳ್ಳತನ ತಡೆಗೆ ವಿಶೇಷ ಒತ್ತು ನೀಡಿ ಎಂಧÀ ಸಚಿವರು ಡ್ರಗ್ಸ್ (ಮಾದಕ ವಸ್ತು) ಮಾರಾಟ ಮತ್ತು ಸೇವನೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದರು.

ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಸೇವನೆ ನಡೆಯುತ್ತಿದೆ. ಇದರಿಂದ ಯುವ ಜನತೆಯ ಭವಿಷ್ಯ ಮೇಲೆ ಮಂಕು ಕವಿದಿದೆ.ಡ್ರಗ್ಸ್ ಮಾರಾಟ ಜಾಲವನ್ನು ತಡೆಗಟ್ಟಿ, ಮಾರಾಟ ಮಾಡುವವರನ್ನು ಸದೆಬಡಿಯುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಬೇಕು ಎಂದು ತಿಳಿಸಿದರು.

ರಾತ್ರಿ ವೇಳೆ ನಡೆಯುವ ಕಳ್ಳತನಗಳನ್ನು ತಡೆಗಟ್ಟಲು ವಿಶೇಷ ದಳ ರಚಿಸಿ, ನಿರಂತರ ರಾತ್ರಿ ಗಸ್ತು ತಿರುಗಿಸಬೇಕು. ಆದಷ್ಟು ಬೇಗ ನಗರದ ಸೂಕ್ಷ÷್ಮ ಪ್ರದೇಶಗಳಲ್ಲಿ ಐಟಿಎಂಎಸ್ ಎ ಐ ಕ್ಯಾಮೆರಾಗಳನ್ನು ಅಳವಡಿಸುವುದರಿಂದ ಅಪರಾಧಗಳನ್ನು ತಡೆಗಟ್ಟಲು ಮತ್ತು ಅಪರಾಽಗಳನ್ನು ಪತ್ತೆಹಚ್ಚಲು ಅನುಕೂಲವಾಗುತ್ತz ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಽಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ಧಾರ್ಥ ಗೋಯಲ್ , ಜಮಖಂಡಿ ಎಸಿ ಶ್ವೇತಾ ಬಿಡಿಕರ ಡಿವೈಎಸ್‌ಪಿ ಸೈಯದ್ ರೋಷನ್ ಜಮೀರ್, ಸಿಪಿಐ ಮಹದೇವ ಶಿರಹಟ್ಟಿ, ಪಿಎಸ್‌ಐ ಅಜಿತಕುಮಾರ ಹೊಸಮನಿ ಉಪಸ್ಥಿತರಿದ್ದರು. ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಮುಧೋಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸದುಗೌಡ ಪಾಟೀಲ್ ನಗರಸಭೆ ಅಧ್ಯಕ್ಷ ಸುನಂದಾ ತೇಲಿ, ಡಾ. ತಿಮ್ಮಣ್ಣ ಅರಳಿಕಟ್ಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net