ಡ್ರಗ್ಸ್ ಮುಕ್ತ ಕೊಡಗು ನಿರ್ಮಾಣಕ್ಕೆ ಸಂಕಲ್ಪ

24 Spt 2
ಸೋಮವಾರಪೇಟೆಯ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್‌ಗೌಡ ಅವರನ್ನು ಸನ್ಮಾನಿಸಲಾಯಿತು. ಸತೀಶ್, ಶಶಿಧರ್, ಲೋಕೇಶ್, ಸುಜಿತ್ ಇದ್ದರು.
Published on

ಸೋಮವಾರಪೇಟೆ: ಯುವ ಸಮೂಹ ದೇಶದ ಸಂಪತ್ತು. ಯುವಕರನ್ನು ದೇಶದ ಶಕ್ತಿಯನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶಾಸಕ ಡಾ.ಮಂತರ್‌ಗೌಡ ಹೇಳಿದರು.

ಇಲ್ಲಿನ ಸ್ಥಳೀಯ ಕೊಡವ ಸಮಾಜದಲ್ಲಿ ಸೋಮವಾರ ಆಯೋಜಿಸಿದ್ದ ಡಾ.ಮಂತರ್‌ಗೌಡ ಅಭಿಮಾನಿ ಬಳಗ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಡ್ರಗ್ಸ್ ಮುಕ್ತ ಕೊಡಗು ನಿರ್ಮಾಣದ ಸಂಕಲ್ಪ ನನ್ನದಾಗಿದ್ದು, ಇದಕ್ಕೆ ಜನತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ. ಶಾಲಾ-ಕಾಲೇಜುಗಳಲ್ಲಿ ಉತ್ತಮ ಪರಿಸರ ನಿರ್ಮಾಣ, ಪ್ರತಿ ಗ್ರಾಮದಲ್ಲಿ ಯುವಕ ಸಂಘಗಳ ಬಲವರ್ಧನೆಗೆ ಶ್ರಮಿಸಲಾಗುವುದು ಎಂದರು.

ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಕುಶಾಲನಗರ ಬ್ಲಾಕ್ ಅಧ್ಯಕ್ಷ ವಿ.ಪಿ.ಶಶಿಧರ್, ಮುಖಂಡರಾದ ಕೆ.ಎಂ.ಲೋಕೇಶ್, ಎಸ್.ಎಂ. ಚಂಗಪ್ಪ, ಕೆ.ಎ.ಯಾಕೂಬ್, ಬಿ.ಈ. ಜಯೇಂದ್ರ,ಎಚ್.ಆರ್. ಸುರೇಶ್, ನಾಗೇಂದ್ರ ಬಾಬು, ಡಾ. ಅಭಿಮಾನಿ ಬಳಗದ ಅಧ್ಯಕ್ಷ ಸುಜಿತ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net