ಡ್ರೋನ್ ಕ್ಯಾಮರಾ ಅನುಮತಿ ಕಡ್ಡಾಯ

drone
Published on

ಉಡುಪಿ: ಲಾಕ್‌ಡೌನ್ ಸಮಯದಲ್ಲೂ ಕೆಲವು ವ್ಯಕ್ತಿ ಮತ್ತು ಸಂಸ್ಥೆಗಳು ಅನುಮತಿ ಪಡೆಯದೆ ಡ್ರೋನ್ ಕ್ಯಾಮರಾ ಬಳಸುತ್ತಿರುವುದು ಗಮನಕ್ಕೆ ಬಂದಿದ್ದು , ಇನ್ನೂ ಮುಂದೆ ಕ್ಯಾಮಾರಗಳು ಕಂಡು ಬಂದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಂಡು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಕೆ ನೀಡಿದ್ದಾರೆ.

ಅನಗತ್ಯ ಡ್ರೋನ್ ಬಳಕೆಯಿಂದ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಡ್ರೋನ್ ಕ್ಯಾಮರಾಗಳನ್ನು ಉಪಯೋಗಿಸುವ ಬಗ್ಗೆ ಜಿಲ್ಲಾಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಡ್ರೋನ್ ಕ್ಯಾಮರಾಗಳನ್ನು ಹೊಂದಿರುವವರು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನೋಂದಣಿ ಮಾಡಿಸಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net