ತ.ನಾಡಿಗೆ ಕಾವೇರಿ ನೀರು: ರೈತರಿಂದ ಪಂಜಿನ ಮೆರವಣಿಗೆ

60
Published on

ಮೈಸೂರು: ಕಾವೇರಿ ನದಿ ಮೂಲಕ ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ರೈತರು ನಗರದಲ್ಲಿ ಶುಕ್ರವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು.


ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಮಿಳುನಾಡಿಗೆ ನೀರು ಬಿಡುವ ಮೂಲಕ ರಾಜ್ಯದ ರೈತರ ಹಿತಾಸಕ್ತಿಯನ್ನು ರಾಜ್ಯ ಸರ್ಕಾರ ಬಲಿಕೊಟ್ಟಿದೆ.

ಮಳೆಯ ಕೊರತೆಯಿಂದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳು ಇನ್ನೂ ಭರ್ತಿಯಾಗಿಲ್ಲ. ಆದರೆ, ಈಗ ನೀರು ಬಿಡುವ ಮೂಲಕ ಇವುಗಳನ್ನು ಖಾಲಿ ಮಾಡಲಾಗುತ್ತಿದೆ. ಇದರಿಂದಾಗಿ ಸ್ಥಳೀಯ ಕೃಷಿ ಬೆಳೆಗೆ ನೀರಿನ ಅಭಾವವಾಗಲಿದೆ. ಜತೆಗೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಆದ್ದರಿಂದ, ನೀರು ಬಿಡುವುವನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು


ಒಕ್ಕೂಟ ಅಧ್ಯಕ್ಷ ಕುರುಬೂರ ಶಾಂತಕುಮಾರ್, ಕಾರ್ಯಾಧ್ಯಕ್ಷ ವೀರನಗೌಡ ಪಾಟೀಲ್, ಮುಖಂಡರಾದ ಸುರೇಶ್ ಮ.ಪಾಟೀಲ್, ರಮೇಶ್ ಉಗಾರ್, ಜಿ.ವಿ, ಲಕ್ಷ್ಮೀದೇವಿ, ಎಂ.ಬಿ.ಚೇತನ್, ಸೋಮಶೇಖರ್, ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net