ತಂಗಡಗಿ ವಿರುದ್ಧ ಕ್ರಮಕ್ಕೆ ಆಗ್ರಹ

BJP
Published on

ಚಿತ್ರದುರ್ಗ: ಪ್ರಧಾನಿ ನರೇಂದ್ರಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಶಿವರಾಜ ತಂಗಡಗಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಬುಧವಾರ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದರು.

ಮೋದಿ ಅವರ ಹೆಸರನ್ನು ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿರುವ ತಂಗಡಗಿ ವಿರುದ್ಧ ಕ್ರಮವಹಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಒತ್ತಾಯಿಸಿ ಜಿಲ್ಲಾ ಚುನಾವಣಾಧಿಕಾರಿ ಮೂಲಕ ಮನವಿ ರವಾನಿಸಿದರು.

ಅವರ ಹೇಳಿಕೆಯಿಂದ ಯುವಕರು ಮತ ಚಲಾಯಿಸಲು ಮತಗಟ್ಟೆಗಳಿಗೆ ಬರಲು ಹೆದರುವ ಸಾಧ್ಯತೆಗಳಿವೆ. ರಾಜ್ಯ ಹಾಗೂ ಜಿಲ್ಲೆಯ ಯುವ ಮತದಾರರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಕೋರಿದರು.

ಕಾರ್ಯಕರ್ತರಾದ ಆರ್.ಪಾಲಯ್ಯ, ಚಂದ್ರಶೇಖರ್, ಧನು, ಸಂಜಯ್, ಆದರ್ಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net