ತಂತ್ರಜ್ಞಾನ ಬಳಕೆಯಿಂದ ಜ್ಞಾನ ಹೆಚ್ಚಿಸಿಕೊಳ್ಳಿ

16Anand4
Published on

ತಂತ್ರಜ್ಞಾನ ಬಳಕೆಯಿಂದ ಜ್ಞಾನ ಹೆಚ್ಚಿಸಿಕೊಳ್ಳಿ

||ವಿದ್ಯಾರ್ಥಿಗಳಿಗೆ ಡಾ.ಅಲ್ಲಮಪ್ರಭು ಸ್ವಾಮೀಜಿ ಸಲಹೆ

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ಇಂದು ತಾಂತ್ರಿಕವಾಗಿ ಜಗತ್ತು ಬದಲಾಗುತ್ತಿದೆ. ಅದರಂತೆ ವಿದ್ಯಾರ್ಥಿಗಳು ತಂತ್ರಜ್ಞಾನ ಬಳಕೆಯಿಂದ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ನಾಗನೂರ ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.

ನಗರದ ಎಸ್ .ಜಿ ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯ ಸಮಾರಂಭದ ದಿವ್ಯ ಸಾನಿದ್ಯ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಬೇಕು,ಜೀವನದ ಗುರಿ ಸಾಧನೆಗೆ ನಿರಂತರವಾಗಿ ಶ್ರಮಿಸುವ ಮೂಲಕ ಪಾಲಕರು ಮತ್ತು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ, ಕಿರಣಕುಮಾರ ಸವಣೂರ ಗ್ರಂಥಾಲಯವು ವಿದ್ಯಾರ್ಥಿಗಳು ಜ್ಞಾನ ಹೆಚ್ಚಿಸುವಲ್ಲಿ ಸಹಕಾರಿಯಾಗಿದ್ದು,ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಸಂಸ್ಥೆಯ ಚೇರ್ಮನ್ ಎಫ್. ವಿ ಮಾನ್ವಿ, ಪ್ರಾಂಶುಪಾಲ ಡಾ, ಬಿ.ಆರ್ ಪಟಗುಂದಿ, ಗ್ರಂಥಪಾಲಕರಾದ ನಳಿನಿ ಅಂಬಲಿ,ಯಲ್ಲಪ್ಪ ಮಡಿವಾಳರ, ವಿಠ್ಠಲ ಕುರುಬರ, ಶಶಿಕಲಾ ಹೊಸಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net